ಎಂಇಎಸ್ ಪುಂಡಾಟಿಕೆ ಖಂಡಿಸಿ ಮಾದನಾಯಕನಹಳ್ಳಿಯಲ್ಲಿ ಕರವೇ ಪ್ರೊಟೆಸ್ಟ್ Protest saaksha tv
ತುಮಕೂರು : ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಆಗ್ರಹಿಸಿ ರಾಜ್ಯದ ಮೂಲೆ ಮೂಲೆಯಲ್ಲೂ ಕನ್ನಡಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.
ಅದರ ಮುಂದುವರೆದ ಭಾಗವಾಗಿ ತುಮಕೂರಿನ ಮಾದನಾಯಕನಹಳ್ಳಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿ ಪ್ರತಿಭಟಿಸಿದ್ದಾರೆ.
ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ರಸ್ತೆ ತಡೆದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.
ನೆಲಮಂಗಲ ಸಮೀಪದ ಮಾಕಳಿ ಬಳಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದ್ದು, ಕೆಲ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಒಂದು ವೇಳೆ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೇ ಉಗ್ರ ಹೋರಾಟ ನಡೆಸೋದಾಗಿ ಎಚ್ಚರಿಕೆ ನೀಡಿದ್ದಾರೆ.