ಪೂರ್ಣಪ್ರಮಾಣದ ತರಗತಿ ಆರಂಭಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರೊಟೆಸ್ಟ್ Protest saaksha tv
ಮಂಡ್ಯ : ಪೂರ್ಣಪ್ರಮಾಣದ ತರಗತಿ ಆರಂಭಕ್ಕೆ ಒತ್ತಾಯಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿ ಸ್ಥಗಿತಗೊಂಡಿವೆ. ಕಾಲೇಜಿನಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕಾರಿಸಿದ್ದಾರೆ.
ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ತಕ್ಷಣವೇ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಅಲ್ಲದೇ ವಿದ್ಯಾರ್ಥಿಗಳಿಗೆ ಯಾವುದೇ ಪಾಠ ಮಾಡದೆ ಸಿ-೧ ಪರೀಕ್ಷೆಯನ್ನ ಮಾಡಲು ಮುಂದಾಗಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಹೀಗಾಗಿ ತಕ್ಷಣವೇ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.