ಬಳ್ಳಾರಿ ವಿಭಜನೆ ವಿರೋಧಿಸಿ ನಾಳೆ ಬೃಹತ್ ಪ್ರತಿಭಟನೆ
ಬಳ್ಳಾರಿ : ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ರಚಿಸುವ ಸಲುವಾಗಿ ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವ ಸರ್ಕಾರದ ಕ್ರಮಕ್ಕೆ ಗಣಿನಾಡಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.
ಅಖಂಡ ಜಿಲ್ಲೆ ಉಳಿವಿಗಾಗಿ ಒತ್ತಾಯಿಸಿ, ಜಿಲ್ಲೆ ವಿಭಜನೆ ವಿರೋಧಿಸಿ ನಾಳೆ ಬೃಹತ್ ಪ್ರತಿಭಟನೆ ನಡೆಸಲು ಅಖಂಡ ಜಿಲ್ಲಾ ಹೋರಾಟ ಸಮಿತಿ ನಿರ್ಧರಿಸಿದೆ.
ಈ ಹಿನ್ನೆಲೆ ಪ್ರತಿಭಟನೆ ರೂಪುರೇಷೆಗಳನ್ನು ರೂಪಿಸುವ ಸಲುವಾಗಿ ಬಳ್ಳಾರಿಯ ನಾರಾಯಣ ರಾವ್ ಪಾರ್ಕ್ ನಲ್ಲಿ ಅಖಂಡ ಜಿಲ್ಲಾ ಹೋರಾಟ ಸಮಿತಿ ಮಹತ್ವದ ಸಭೆ ನಡೆಸಿದೆ.
ಸಭೆಯಲ್ಲಿ ಕನ್ನಡಪರ, ರೈತ ಪರ, ಕಾರ್ಮಿಕ ಪರ, ಸಂಘಟನೆಗಳು ಮತ್ತು ಕಾಂಗ್ರೆಸ್ ಮುಖಂಡರು ಭಾರಿಯಾಗಿದ್ದು, ನಾಳೆಯ ಪ್ರತಿಭಟನೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ನಕ್ಷತ್ರ ಆಮೆ ಮಾರಾಟ ಯತ್ನ: ಸಿಐಡಿ ಪೊಲೀಸರಿಂದ ನಾಲ್ವರ ಬಂಧನ
ಇನ್ನು ನಾಳೆಯ ಪ್ರತಿಭಟನೆಯಲ್ಲಿ ನೂರಾರು ಜನ ಭಾಗಿಯಾಗುವ ಸಾಧ್ಯತೆಗಳಿವೆ. ಕನ್ನಡ ಚಳುವಳಿಯ ಹೋರಾಟಗಾರ ವಾಟಾಳ್ ನಾಗರಾಜ ನಾಳೆ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.
ಅಖಂಡ ಬಳ್ಳಾರಿ ಜಿಲ್ಲಾ ಉಳಿಸಿ, ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









