ಬೆಂಗಳೂರು: ಶಕ್ತಿ ಯೋಜನೆ ವ್ಯಾಪ್ತಿಗೆ ಖಾಸಗಿ ಬಸ್ ಗಳನ್ನ (Private Bus) ತರಬೇಕು. 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಿಸಬೇಕಿ ಎಂಬ ಬೇಡಿಕೆಗಳಿಗಾಗಿ ನಡೆಯುತ್ತಿದ್ದ ಬೆಂಗಳೂರು ಬಂದ್ ನ್ನು ಹಿಂಪಡೆಯಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಬೇಡಿಕೆಗಳನ್ನ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ. ಹೀಗಾಗಿ ಮಧ್ಯಾಹ್ನ 3 ಗಂಟೆ ವೇಳೆಗೆ ಪ್ರತಿಭಟನೆ ಹಿಂಪಡೆಯಲಾಗಿದೆ.
ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, 37 ಸಂಘಟನೆಯವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೀರಿ. ನನ್ನನ್ನೂ ನಿಮ್ಮ ಜೊತೆ ಸೇರಿಸಿಕೊಳ್ಳಿ. ನಿಮ್ಮ ಬೇಡಿಕೆಗಳಲ್ಲಿ ಶಕ್ತಿ ಯೋಜನೆ ಹಾಗೂ ತೆರಿಗೆ ಎರಡು ಬೇಡಿಕೆ ನಮ್ಮ ಸರ್ಕಾರದಿಂದ ಆಗಿರುವ ಸಮಸ್ಯೆ. ಈ ಬೇಡಿಕೆಗಳನ್ನ ಈಡೇರಿಸುವುದಾಗಿ ಹೇಳಿದ್ದೇನೆ, ಈಡೇರಿಸುತ್ತೆನೆ ಎಂದು ಭರವಸೆ ನೀಡಿದ್ದಾರೆ.
ಸದ್ಯ ಓಲಾ, ಊಬರ್, ಬೈಕ್ ಟ್ಯಾಕ್ಸಿ ಬೇಡಿಕೆ ಕೋರ್ಟ್ನಲ್ಲಿದೆ. ಸೀನಿಯರ್ ಅಡ್ವೋಕೇಟ್ ನೇಮಿಸಿ ತೆರವು ಮಾಡುವ ಕೆಲಸ ಮಾಡ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರಲ್ಲಿ ಮದ್ಯ ನಿಷೇಧ!
ಬೆಂಗಳೂರು: ಇಂದು ನಗರದ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗುತ್ತಿರು ಹಿನ್ನೆಲೆಯಲ್ಲಿ ಮದ್ಯ ನಿಷೇಧಿಸಲಾಗಿದೆ. ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಿ...