ಬೆಳಗಾವಿ ಗಣೇಶಪುರ ಜ್ಯೋತಿನಗರದಲ್ಲಿ ಆಶಾ,ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರ ಮೇಲೆ ನಡೆದ ಹಲ್ಲೆ ಖಂಡಿಸಿ ಕಾರ್ಯಕರ್ತೆಯರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಗಣೇಶಪುರ ಜ್ಯೋತಿನಗರದಲ್ಲಿ ಆಶಾ,ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಲಾಗಿದ್ದು, ಇದರಿಂದ ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ನಮಗೆ ರಕ್ಷಣೆ ಬೇಕು ಎಂದು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕರ್ತೆಯರು, ನಮಗೆ ಪೊಲೀಸ್ ರಕ್ಷಣೆ ನೀಡಿ, ಕೆಲಸ ಮಾಡಿಸಿಕೊಳ್ಳಲಿ. ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದರು.ನೂರಾರು ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.