ಎಂಇಎಸ್, ಶಿವಸೇನೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ Mandya saaksha tv
ಮಂಡ್ಯ : ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆದ ಎಂಇಎಸ್ ಹಾಗೂ ಶಿವಸೇನೆ ಸಂಘಟನೆ ವಿರುದ್ದ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ವತಿಯಿಂದ ಪ್ರತಿಭಟನೆ ನಡೆಸಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಎಸ್ಪಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.
ಪ್ರತಿಭಟನೆ ವೇಳೆ ಕನ್ನಡಕ್ಕೆ ಅಪಮಾಡಿದ ಕಿಡಿಗೇಡಿಗಳ ಗಡಿ ಪಾರು ಮಾಡುವಂತೆ ಒತ್ತಾಯ ಮಾಡಲಾಗಿದೆ.
ಹಾಗೇ ಈ ಕೃತ್ಯದ ಹಿಂದೆ ರಾಜಕಾರಣಗಳ ಕೈವಾಡ ಇದ್ರೆ, ಮೊದಲು ಅವರಿಗೂ ಕ್ರಮ ವಹಿಸಬೇಕು.
ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನ ನಿರ್ಮಾಣ ಮಾಡಬೇಕು. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಲಾಗಿದೆ.
ಇಂದು ವೇಳೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.









