ಇಸ್ಲಾಮಾಬಾದ್: ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಬಿಡುಗಡೆಗೆ ಪಾಕಿಸ್ತಾನ್ ದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ದಾರಿ ಮಾಡಿಕೊಟ್ಟಿದೆ.
ಪ್ರತಿಭಟನಾಕಾರರು ಹಾಗೂ ಪೊಲೀಸರೊಡನೆ ನಡೆದ ಘರ್ಷಣೆಯಲ್ಲಿ ನಾಲ್ವರು ಸೈನಿಕರು ಹಾಗೂ ಓರ್ವ ಪ್ರತಿಭಟನಾಕಾರ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ ಪಾಕಿಸ್ತಾನದ ಸೇನೆ ʻಕಂಡಲ್ಲಿ ಗುಂಡುʼ ಆದೇಶ ಹೊರಡಿಸಲಾಗಿದೆ.
ಇಮ್ರಾನ್ ಖಾನ್ ಬೆಂಬಲಿಗರು ವಿವಿಧೆಡೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸುತ್ತ ರಾಜಧಾನಿ ಇಸ್ಲಾಮಾಬಾದ್ ಪ್ರವೇಶಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾ ಮೆರವಣಿಗೆ ಹಿಂಸಚಾರಕ್ಕೆ ತಿರುಗಿದ್ದು, ಪೊಲೀಸರು, ಸೇನೆ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಹಾಗೂ 70ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು 3,500 ಕ್ಕೂ ಹೆಚ್ಚು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.