ಲಖನೌ: ಕಳೆದ ವರ್ಷದ ಡಿಸೆಂಬರ್ನಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ವಿವಾದಾತ್ಮಕ ಪೌರತ್ವ ಕಾಯ್ದೆ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಉತ್ತರಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್ಎಸ್ಎ)ಅಡಿ ಪ್ರಕರಣ ದಾಖಲಿಸಲಾಗಿದೆ.
ಕಫೀಲ್ ಖಾನ್ ವಿರುದ್ಧ ಎಫ್ಐಆರ್ ದಾಖಲಾಗಿದ್ದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಪೊಲೀಸರು ಕಳೆದ ತಿಂಗಳು ಖಾನ್ರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಕಫೀಲ್ ಖಾನ್ಗೆ ಸೋಮವಾರ 60,000 ರೂ. ಬಾಂಡ್ ಮೇಲೆ ಜಾಮೀನು ಲಭಿಸಿದೆ. ಆದರೆ ಅವರು ಇನ್ನೂ ಮಥುರಾ ಜೈಲಿನಿಂದ ಬಿಡುಗಡೆಯಾಗಿಲ್ಲ. ಜಾಮೀನು ಲಭಿಸಿದ ಹೊರತಾಗಿಯೂ ಖಾನ್ರನ್ನು ಮಥುರಾ ಜೈಲಿನಿಂದ ಇನ್ನೂ ಬಿಡುಗಡೆ ಮಾಡದಿರುವುದನ್ನು ಪ್ರಶ್ನಿಸಿ ಕಫೀಲ್ ಕುಟುಂಬಸ್ಥರು ಅಲಿಗಢದ ಮುಖ್ಯ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ರನ್ನು ಸಂಪರ್ಕಿಸಿದ್ದಾರೆ.
ವಿಶ್ವವಿದ್ಯಾಲಯದ ಶಾಂತಿಯ ವಾತಾವರಣವನ್ನು ಕದಡಲು ಯತ್ನಿಸಿದ್ದಾರೆ ಎಂದು ಡಿ.13ರಂದು ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.