ಬೆಂಗಳೂರು: ಪಿಎಸ್ ಐ ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಲಾಗಿತ್ತು. ಮನವಿಯ ಮೇರೆಗೆ ಪಿಎಸ್‍ಐ ಪರೀಕ್ಷೆಯನ್ನು (PSI Recruitment Exam) ಸೆ.22ರ ಬದಲು ಸೆ.28ರಂದು ಶನಿವಾರ ನಡೆಸಲು ತೀರ್ಮನಿಸಲಾಗಿದೆ. ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷೆ ಹಾಗೂ ಯುಪಿಎಸ್ ಸಿ ಪರೀಕ್ಷೆ ಎರಡೂ ಒಂದೇ ದಿನ ನಿಗದಿಯಾಗಿತ್ತು. ಹೀಗಾಗಿಯೇ ಪಿಎಸ್ ಐ ಪರೀಕ್ಷೆಯನ್ನು ಮುಂದೂಡವಂತೆ ಮನವಿಗಳು ಕೇಳಿ ಬಂದಿದ್ದವು. ಹೀಗಾಗಿ ಪಿಎಸ್ ಐ ಪರೀಕ್ಷೆ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
ರಾಜಧಾನಿ ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಸೆ.22ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಿರ್ಧರಿಸಿತ್ತು. ಅದೇ ದಿನ ಯುಪಿಎಸ್ ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಪರೀಕ್ಷೆ ಮುಂದೂಡುವಂತೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹಾಕಿದ್ದರು.
ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ 66,990 ಜನ ಲಿಖಿತ ಪರೀಕ್ಷೆ ಬರೆಯಲಿದ್ದು, ಸಿದ್ಧತೆ ನಡೆಸಲಾಗಿದೆ.








