PSI ಮರು ಪರೀಕ್ಷೆ.. ಪಾಸಾದ ಅಭ್ಯರ್ಥಿಗಳ ಕಣ್ಣೀರು.. ಸಿದ್ದು ಆಕ್ರೋಶ
ಬೆಂಗಳೂರು : ಪಿಎಸ್ ಐ ಮರು ಪರೀಕ್ಷೆಗೆ ಸರ್ಕಾರದ ತೀರ್ಮಾನಕ್ಕೆ ಪಾಸಾದ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಈ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳನ್ನು ಮಾಡಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮರುಪರೀಕ್ಷೆಯ ನಿರ್ಧಾರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಲಿಕ್ಕಾಗಿಯೇ? ಇಲ್ಲವೇ ಹಗರಣವನ್ನು ಮುಚ್ಚಿಹಾಕಿ ದೊಡ್ಡ ತಲೆಗಳನ್ನು ಉಳಿಸಲಿಕ್ಕಾಗಿಯೇ?
ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್ಗಳನ್ನು ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ 'ಚೌಕಿದಾರ'ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು. 3/10#PSISCAM
— Siddaramaiah (@siddaramaiah) April 30, 2022
ಪಿಎಸ್ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಬಂಧನವಾದ ತಕ್ಷಣ ಮರುಪರೀಕ್ಷೆಯ ನಿರ್ಧಾರದ ಹಿಂದಿನ ರಹಸ್ಯ ಏನು? ಆಕೆ ನೀಡಿರುವ ಹೇಳಿಕೆಯಲ್ಲಿ ಅಂತಹ ಸ್ಪೋಟಕ ಸಂಗತಿಗಳೇನಿದೆ?
ಪಿಎಸ್ಐ ನೇಮಕಾತಿ ಹಗರಣವನ್ನು ನಮ್ಮ ಪಕ್ಷ ಬಯಲಿಗೆಳೆದಾಗ ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ್ದ ಬಿಜೆಪಿ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ ಎಂದು ಕುಟುಕಿದ್ದಾರೆ.
ಪಿಎಸ್ಐ ನೇಮಕಾತಿಗೆ @BJP4Karnataka ಸರ್ಕಾರ ಯಾವ ಆಧಾರದಲ್ಲಿ ಮರುಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು @CMofKarnataka ಅವರು ಸ್ಪಷ್ಟಪಡಿಸಬೇಕು.
ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆಯೇ? ಹಾಗಿದ್ದರೆ ಆ ವರದಿ ಬಿಡುಗಡೆ ಮಾಡಿ. 5/10#PSISCAM— Siddaramaiah (@siddaramaiah) April 30, 2022
ರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ.
ಭ್ರಷ್ಟಾಚಾರ, ಅಪ್ರಾಮಾಣಿಕತೆ ಮತ್ತು ನಿಷ್ಕ್ರಿಯತೆಯನ್ನು ಪ್ರಶ್ನಿಸದೆ ಇದ್ದರೆ ಕೊನೆಗೆ ಈ ಪಿಡುಗಿಗೆ ಬಹುಸಂಖ್ಯೆಯಲ್ಲಿರುವ ಪ್ರಾಮಾಣಿಕರೇ ಕಷ್ಟ-ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವುದಕ್ಕೆ ಪಿಎಸ್ಐ ನೇಮಕಾತಿ ಅಕ್ರಮ ಸಾಕ್ಷಿ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
PSI re exam siddaramaiah slams bjp








