Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ನೋಟಿಸ್ ನೀಡಿರುವುದನ್ನು ರಾಜಕೀಯಗೊಳಿಸಬೇಡಿ : ಖರ್ಗೆಗೆ ಬಿಜೆಪಿ ಟಾಂಗ್

Mahesh M Dhandu by Mahesh M Dhandu
April 25, 2022
in Newsbeat, Politics, ರಾಜಕೀಯ
Corona is firm for Priyank Kharge saaksha tv
Share on FacebookShare on TwitterShare on WhatsappShare on Telegram

BJP | ನೋಟಿಸ್ ನೀಡಿರುವುದನ್ನು ರಾಜಕೀಯಗೊಳಿಸಬೇಡಿ : ಖರ್ಗೆಗೆ ಬಿಜೆಪಿ ಟಾಂಗ್

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದ ಬಗ್ಗೆ ಪ್ರಿಯಾಂಕ್ ಖರ್ಗೆ ಅವರ ಬಳಿ ಮಾಹಿತಿ, ದಾಖಲೆ ಇದ್ದರೆ ಅದನ್ನು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸಲ್ಲಿಸುವುದು ಅವರ ಕರ್ತವ್ಯ. ಈ ಕಾರಣಕ್ಕಾಗಿಯೇ ಪ್ರಿಯಾಂಕ್ ಅವರಿಗೆ ಸಿಐಡಿ ನೋಟಿಸ್ ನೀಡಿದೆ. ತನಿಖೆಗೆ ಸಹಕರಿಸುವುದನ್ನು ಬಿಟ್ಟು ನೋಟಿಸ್ ನೀಡಿರುವುದನ್ನು ರಾಜಕೀಯಗೊಳಿಸಬೇಡಿ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.

Related posts

B S Yadiyurappa: ರಾಷ್ಟ್ರಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ  ಸ್ಥಾನ

ಕಾವೇರಿ ನೀರು ಬಿಡುಗಡೆ ವಿಚಾರ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

September 19, 2023
ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

September 19, 2023

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಸಿಐಡಿ ನೋಟೀಸ್ ನೀಡಿದ್ದು, ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿ ಕುಟುಕಿದೆ.  

ಬಿಜೆಪಿ ಟ್ವೀಟ್ ನಲ್ಲಿ.. ಪಿಎಸ್‌ಐ ನೇಮಕ ಹಗರಣ ವಿಚಾರದಲ್ಲಿ ಕಾಂಗ್ರೆಸ್ ಇಷ್ಟು ದಿನ ʼಅಟೆನ್ಷನ್ ಡೈವರ್ಟ್‌ʼ ಮಾಡುವ ಕೆಲಸ ಮಾಡುತ್ತಿತ್ತು. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಈ ಕೆಲಸದ ಗುತ್ತಿಗೆ ಪಡೆದವರಂತೆ ವರ್ತಿಸಿದರು. ಆದರೆ ಈಗ ಹಗರಣದ ಬಾಲ ಇವರ ಕಾಲನ್ನೇ ಸುತ್ತಿಕೊಂಡಿದೆ. ಗಮನ ಬೇರೆಡೆ ಸೆಳೆಯಲು ಮಾಡಿದ ಪ್ರಯತ್ನವೆಲ್ಲವೂ ವ್ಯರ್ಥವಾಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ವಿಚಾರವನ್ನು ಮರೀಚಿಕೆಯಾಗಿಸಿದ ಕುಟುಂಬವೇ ಪಿಎಸ್‌ಐ ನೇಮಕ ಹಗರಣದಲ್ಲಿ ಭಾಗಿಯಾಗಿದೆ. ಒಂದು ಬೆರಳು ಬೇರೆಯವರತ್ತ ತೋರಿದರೆ ನಾಲ್ಕು ಬೆರಳು ತಮ್ಮತ್ತ ಇರುತ್ತದೆ ಎಂಬುದಕ್ಕೆ ಪಿಎಸ್‌ಐ ನೇಮಕ ಹಗರಣ ಜ್ವಲಂತ ಉದಾಹರಣೆಯಾಗಿದೆ. ಆರೋಪ ಮಾಡಿದವರನ್ನೇ ಹಗರಣ ಸುತ್ತಿಕೊಳ್ಳುತ್ತಿದೆ.

ಪಿಎಸ್ಐ ನೇಮಕಾತಿ ಹಗರಣ ಬಯಲಾಗುವ ಮುನ್ನವೇ ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್‌ ಪ್ರಿಯಾಂಕ್ ಖರ್ಗೆ ಅವರ ಬಳಿ ಇತ್ತು.

ನೇಮಕಾತಿ ಹಗರಣ ಬಯಲಾದ ಬಳಿಕ ಆಡಿಯೋ ಕ್ಲಿಪ್ ಬಿಡುಗಡೆ ಮಾಡಲು ಕಾರಣವೇನು?

ಅಕ್ರಮದ ಆರೋಪ ತಮ್ಮ ಬುಡಕ್ಕೆ ಬಂದಾಗ ವಿಷಯಾಂತರ ಮಾಡುವ ವ್ಯರ್ಥ ಪ್ರಯತ್ನವಿದು.#CONgressPSIToolkit

— BJP Karnataka (@BJP4Karnataka) April 25, 2022

ಪಿಎಸ್ಐ ನೇಮಕಾತಿ ಹಗರಣ ಬಯಲಾಗುವ ಮುನ್ನವೇ ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್‌ ಪ್ರಿಯಾಂಕ್ ಖರ್ಗೆ ಅವರ ಬಳಿ ಇತ್ತು.  ನೇಮಕಾತಿ ಹಗರಣ ಬಯಲಾದ ಬಳಿಕ ಆಡಿಯೋ ಕ್ಲಿಪ್ ಬಿಡುಗಡೆ ಮಾಡಲು ಕಾರಣವೇನು? ಅಕ್ರಮದ ಆರೋಪ ತಮ್ಮ ಬುಡಕ್ಕೆ ಬಂದಾಗ ವಿಷಯಾಂತರ ಮಾಡುವ ವ್ಯರ್ಥ ಪ್ರಯತ್ನವಿದು.

ಮಾಧ್ಯಮದವರ ಮುಂದೆ ಪತ್ರಿಕಾ ಗೋಷ್ಠಿ ನಡೆಸುವಾಗ ತನಿಖಾ ಅಧಿಕಾರಿಯಂತೆ ವರ್ತಿಸಿದ ಪ್ರಿಯಾಂಕ್ ಖರ್ಗೆ, ಪೊಲೀಸರು ತನಿಖೆಗೆ ಸಹಕರಿಸುವಂತೆ ಕೇಳಿದಾಗ ಬೆಚ್ಚಿ ಬಿದ್ದಿದ್ದಾರೆ. ಮಾಧ್ಯಮದ ಮುಂದೆ ಹೋಗುವಾಗಿದ್ದ ಸಾಕ್ಷ್ಯ, ಆಡಿಯೋ ಟೇಪ್‌ ಈಗೇನಾಗಿದೆ? ನೇಮಕಾತಿ ಹಗರಣದ ತನಿಖೆ ಚುರುಕಾಗುತ್ತಿರುವಂತೆ ನಿಮ್ಮ ನೆಲ ಅಲುಗಾಡಿತೇ ಎಂದು ಕುಟುಕಿದೆ.

ಪಿಎಸ್‌ಐ ನೇಮಕಾತಿ ಅಕ್ರಮದ ಬಗ್ಗೆ @PriyankKharge ಅವರ ಬಳಿ ಮಾಹಿತಿ, ದಾಖಲೆ ಇದ್ದರೆ ಅದನ್ನು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸಲ್ಲಿಸುವುದು ಅವರ ಕರ್ತವ್ಯ.

ಈ ಕಾರಣಕ್ಕಾಗಿಯೇ ಪ್ರಿಯಾಂಕ್ ಅವರಿಗೆ ಸಿಐಡಿ ನೋಟಿಸ್ ನೀಡಿದೆ. ತನಿಖೆಗೆ ಸಹಕರಿಸುವುದನ್ನು ಬಿಟ್ಟು ನೋಟಿಸ್ ನೀಡಿರುವುದನ್ನು ರಾಜಕೀಯಗೊಳಿಸಬೇಡಿ.#CONgressPSIToolkit pic.twitter.com/O0FifAerK4

— BJP Karnataka (@BJP4Karnataka) April 25, 2022

ಪಿಎಸ್‌ಐ ನೇಮಕ ಅಕ್ರಮದಲ್ಲಿ ಹೊರ ಬೀಳುತ್ತಿರುವ ದಾಖಲೆ, ಶಾಮೀಲಾದ ವ್ಯಕ್ತಿಗಳು, ಬಂಧಿತರಾದ ವ್ಯಕ್ತಿಗಳ ಹಿನ್ನೆಲೆಯೆಲ್ಲವೂ ಕಾಂಗ್ರೆಸ್ ಪ್ರಭಾವಿ ನಾಯಕರ ನಿಕಟ ಸಂಪರ್ಕವನ್ನು ಸೂಚಿಸುತ್ತಿದೆ.ಹಗರಣದಲ್ಲಿ ಸಿಕ್ಕಿ ಬೀಳುತ್ತಿರುವ ಆರೋಪಿಗಳೆಲ್ಲರೂ ಖರ್ಗೆ ಕುಟುಂಬದ ಮನೆಯ ಸುತ್ತ ಗಿರಕಿ ಹೊಡೆಯುವವರೇ ಆಗಿದ್ದಾರೆ.

ಮಹಾಂತೇಶ್ ಪಾಟೀಲ್ ಹಾಗೂ ಅವರ ಸೋದರ ಖರ್ಗೆ ಕುಟುಂಬ ಹಾಗೂ ಕಾಂಗ್ರೆಸ್ ಜೊತೆಗೆ ಹೊಂದಿರುವ ಸಾಂಗತ್ಯದ ಬಗ್ಗೆ  ಡಿ.ಕೆ.ಶಿವಕುಮಾರ್ ಅವರು ಏಕೆ ಮೌನವಾಗಿದ್ದಾರೆ? ಪ್ರಿಯಾಂಕ ಖರ್ಗೆ ಹೇಳುತ್ತಿರುವ ದಿನಕ್ಕೊಂದು ಸುಳ್ಳು ಅಟೆನ್ಷನ್ ಡೈವರ್ಶನ್ ಮಾಡುವ ತಂತ್ರವಷ್ಟೇ ಎಂದು ಬಿಜೆಪಿ ಆರೋಪಿಸಿದೆ. PSI recruitment illegal case bjp reaction

Tags: #Saaksha TVBJPCongressPriyank Karge
ShareTweetSendShare
Join us on:

Related Posts

B S Yadiyurappa: ರಾಷ್ಟ್ರಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ  ಸ್ಥಾನ

ಕಾವೇರಿ ನೀರು ಬಿಡುಗಡೆ ವಿಚಾರ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

by Honnappa Lakkammanavar
September 19, 2023
0

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ...

ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭ

by Honnappa Lakkammanavar
September 19, 2023
0

ಸಂಸತ್ತಿನ ವಿಶೇಷ ಅಧಿವೇಶನದ ಕಲಾಪಗಳು ಇಂದಿನ ಹೊಸ ಸಂಸತ್ ಕಟ್ಟಡದಲ್ಲಿಯೇ ನಡೆಯಲಿದ್ದು, ದೇಶವೇ ಕುತೂಹಲದಿಂದ ನೋಡುತ್ತಿದೆ. ನಿನ್ನೆಯಿಂದ ಸಂಸತ್ತಿನ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನ ಒಟ್ಟು 5...

10 ಲಕ್ಷಕ್ಕ ಅಧಿಕ ಸ್ಥಳಕ್ಕೆ ಮೋದಿ ಭಾಷಣ ನೇರ ಪ್ರಸಾರ

ಸಂಸತ್ ವಿಶೇಷ ಅಧಿವೇಶನ ಅಪ್ಡೇಟ್ಸ್

by Honnappa Lakkammanavar
September 18, 2023
0

ನೂತನ ಸಂಸತ್ ಭವನಕ್ಕೆ ನಾವು ಹೊಸ ಹುಮ್ಮಸ್ಸು, ನವ ಉತ್ಸಾಹ ಹಾಗೂ ನೂತನ ಸಂಕಲ್ಪದೊಂದಿಗೆ ಹೋಗುತ್ತಿದ್ದೇವೆ. ಸದ್ಯ ನಮ್ಮ ಸಾಮರ್ಥ್ಯಕ್ಕೆ ಇಡೀ ವಿಶ್ವವೇ ಬೆರಗಾಗುತ್ತಿದೆ ಎಂದು ಪ್ರಧಾನಿ...

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

by admin
September 17, 2023
0

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಪ್ರತಿದಿನ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಕೈಚೀಲವನ್ನು ಮೀರಿ ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram