PSI ನೇಮಕಾತಿ ಅಕ್ರಮ | ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳ ಬಂಧನ
ಬೆಂಗಳೂರು: PSI ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
PSI ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಕ್ವೀನ್ ಪಿನ್ ದಿವ್ಯಾ ಹಾಗರಗಿಯನ್ನು ಪೊಲೀಸರು ಪುಣಾದಲ್ಲಿ ಬಂಧಿಸಿದ್ದರು. ಈಗ ಬೆಂಗಳೂರಿನಲ್ಲೂ ಅಕ್ರಮ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. 22 ಅಭ್ಯರ್ಥಿಗಳ ಒಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ 12 ಜನರ ಬಂಧಿಸಿದ್ದು, ಉಳಿದವರಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬಂಧಿತ 12 ಮಂದಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಸಿಐಡಿ ಡಿಎಸ್ಪಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನೂ ಸಹ ಸಿಐಡಿಗೆ ವರ್ಗಾಯಿಸಲಾಗಿದೆ.








