PSI recruitment scam | ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಪ್ರಶ್ನೆಗಳ ಸುರಿಮಳೆ
ಬೆಂಗಳೂರು : ಪಿಎಸ್ಐ ನೇಮಕ ಹಗರಣ ಸಂಬಂಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ರಾಜ್ಯ ಬಿಜೆಪಿ ಘಟಕ ಪ್ರಶ್ನೆಗಳ ಸುರಿಮಳೆಗೈದಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಪಿಎಸ್ಐ ನೇಮಕ ಹಗರಣದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆಗೆ ಅವರೇ, ನೀವು ಈ ಮಹತ್ವದ ದಾಖಲೆಯನ್ನು ಮುಚ್ಚಿಟ್ಟಿದ್ದೇಕೆ? ನಿಮ್ಮ ಪಕ್ಷದ ನಾಯಕರ ಹುಳುಕು ಬಯಲಾಗುತ್ತದೆ ಎಂಬ ಭಯವೇ? ಇದೇ ಕಾರಣಕ್ಕಾಗಿ ನೀವು ಸಿಐಡಿ ವಿಚಾರಣೆ ತಪ್ಪಿಸಿಕೊಂಡಿದ್ದೇ? ಅಥವಾ ಹಗರಣದಲ್ಲಿ ನಿಮ್ಮದೂ ಪಾಲಿದೆಯೇ ಎಂದು ಪ್ರಶ್ನಿಸಿದೆ.
ಪ್ರಿಯಾಂಕ ಖರ್ಗೆ ಅವರ ಜೊತೆ ನಾವಿದ್ದೇವೆ ಎಂದು ಕೆಪಿಸಿಸಿ ಭ್ರಷ್ಟಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇಕೆ ಎಂದು ಈಗ ಬಯಲಾಗುತ್ತಿದೆ.
ಹಗರಣದ ನಿರ್ಮಾಣ, ನಿರ್ದೇಶನ, ಚಿತ್ರಕತೆ, ಸಂಭಾಷಣೆ ಎಲ್ಲವೂ ಸಿದ್ಧವಾಗಿದ್ದು ಕೆಪಿಸಿಸಿ ಕಚೇರಿಯಲ್ಲೇ?#CONgressPSIToolkit
— BJP Karnataka (@BJP4Karnataka) April 26, 2022
ಪ್ರಿಯಾಂಕ ಖರ್ಗೆ ಅವರ ಜೊತೆ ನಾವಿದ್ದೇವೆ ಎಂದು ಕೆಪಿಸಿಸಿ ಭ್ರಷ್ಟಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇಕೆ ಎಂದು ಈಗ ಬಯಲಾಗುತ್ತಿದೆ.ಹಗರಣದ ನಿರ್ಮಾಣ, ನಿರ್ದೇಶನ, ಚಿತ್ರಕತೆ, ಸಂಭಾಷಣೆ ಎಲ್ಲವೂ ಸಿದ್ಧವಾಗಿದ್ದು ಕೆಪಿಸಿಸಿ ಕಚೇರಿಯಲ್ಲೇ ಎಂದು ಕುಟುಕಿದೆ.
ಪಿಎಸ್ಐ ನೇಮಕ ಹಗರಣದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ @PriyankKharge ಅವರೇ,
ನೀವು ಈ ಮಹತ್ವದ ದಾಖಲೆಯನ್ನು ಮುಚ್ಚಿಟ್ಟಿದ್ದೇಕೆ?
ನಿಮ್ಮ ಪಕ್ಷದ ನಾಯಕರ ಹುಳುಕು ಬಯಲಾಗುತ್ತದೆ ಎಂಬ ಭಯವೇ?
ಇದೇ ಕಾರಣಕ್ಕಾಗಿ ನೀವು ಸಿಐಡಿ ವಿಚಾರಣೆ ತಪ್ಪಿಸಿಕೊಂಡಿದ್ದೇ?
ಅಥವಾ ಹಗರಣದಲ್ಲಿ ನಿಮ್ಮದೂ ಪಾಲಿದೆಯೇ?#CONgressPSIToolkit
— BJP Karnataka (@BJP4Karnataka) April 26, 2022
ಸಿಆರ್‌ಪಿಸಿ ಪ್ರಕಾರ ತನಿಖಾಧಿಕಾರಿಗಳಿಗೆ ಯಾವುದೇ ಪ್ರಕರಣದ ತನಿಖೆ ನಡೆಸುವಾಗ ದಾಖಲೆ ಹಾಗೂ ಸಾಕ್ಷಿಯ ಮೂಲ ಕೇಳುವ ಅಧಿಕಾರವಿದೆ.ಸಿಐಡಿ ಅಧಿಕಾರಿಗಳು ನಿಯಮದ ಪ್ರಕಾರ ನೋಟಿಸ್ ನೀಡಿದ್ದಾರೆ. ಅಧಿಕಾರಿಗಳ ಈ ನಡೆಯನ್ನು ತಪ್ಪು ಎಂದು ಹೇಳಲು ಕಾಂಗ್ರೆಸ್ಸಿಗರೇನು ಸಂವಿಧಾನ ಹಾಗೂ ಕಾನೂನಿಗೆ ಅತೀತರೇ ಎಂದು ಬಿಜೆಪಿ ಕಿಡಿಕಾರಿದೆ. psi-recruitment-scam karnataka bjp questioning priyank kharge