ಪರೀಕ್ಷಾರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ರವಾನಿಸುತ್ತಿರುವ ವಿಡಿಯೋ ವೈರಲ್
ಕಲಬುರಗಿ: PSI ಅಕ್ರಮ ನೇಮಕಾತಿ ಸಂಬಂಧಿಸಿದಂತೆ ವಿಡಿಯೋ ಒಂದು ಬಹಿರಂಗಗೊಂಡಿದ್ದು, ವಿಡಿಯೋದಲ್ಲಿ ಪರೀಕ್ಷಾರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ರವಾನಿಸಿದ್ದಾರೆ.
ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಉತ್ತರ ನೀಡಲಾಗಿದ್ದು, ಹಣಕೊಟ್ಟ ಅಭ್ಯರ್ಥಿಗಳಿಗೆ A-B-C-D ಮಾದರಿ ಪ್ರಶ್ನೆಪತ್ರಿಕೆಗಳಂತೆ ಒಂದೇ ಬಾರಿಗೆ ಉತ್ತರ ಹೇಳಿಕೊಟ್ಟಿದ್ದಾರೆ. ಇದೀಗ ಪ್ರಶ್ನೆ ಪತ್ರಿಕೆಗೆ ಉತ್ತರ ಕೊಡುವ ವೀಡಿಯೋ ವೈರಲ್ ಆಗಿದೆ.
PSI ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರೋ ಕಿಂಗ್‌ಪಿನ್ ಸೇರಿ ಪ್ರಮುಖ ಆರೋಪಿಗಳನ್ನು ಖೆಡ್ಡಕ್ಕೆ ಬೀಳಿಸಿದ್ದಾರೆ.
ಪ್ರಕರಣದ ರೂವಾರಿಗಳು ಸಿಐಡಿ ಖೆಡ್ಡಕ್ಕೆ ಬೀಳುತ್ತಿದ್ದಂತೆ ಉಳಿದವರಿಗೆ ನಡುಕ ಶುರುವಾಗಿದೆ. ಕಿಂಗ್‌ಪಿನ್‌ಗಳ ವಿಚಾರಣೆ ವೇಳೆ ಹೆಸರುಗಳು ಬಾಯಿಬಿಟ್ಟರೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂಬ ಆತಂಕ ಉಳಿದ ಆರೋಪಿಗಳಿಗೆ ಶುರುವಾಗಿದೆ.