ಸೈಕೋ ಒಬ್ಬಾತ ರಸ್ತೆಯಲ್ಲಿ ಬಾಲಕಿಯ ಮುಖ ಕಚ್ಚಿ ಓಡಿ ಹೋಗಿರುವ ಘಟನೆಯೊಂದು ನಡೆದಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೈಕೋ ವ್ಯಕ್ತಿಯೊಬ್ಬ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿ, ಆಕೆಯ ಮುಖವನ್ನೇ ಕಚ್ಚಿ ಓಡಿ ಹೋಗಿದ್ದಾನೆ. ಈ ಘಟನೆ ಬಾಂಗ್ಲಾದೇಶದ ದಿನಾಜ್ ಪುರದಲ್ಲಿ ನಡೆದಿದೆ.
ಸದ್ಯದ ಮಾಹಿತಿಯಂತೆ ಈ ಭಯಾನಕ ದೃಶ್ಯ ಅಲ್ಲೇ ಪಕ್ಕದಲ್ಲಿನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ದೊಡ್ಡ ಕೋಲಾಹಲವೇ ಸೃಷ್ಟಿಯಾಗಿದೆ. ಆತನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಸೈಕೋ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತವಾಗುತ್ತಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.