ಕೊರೊನಾ ಹರಡುವಿಕೆ ಹೆಚ್ಚಾಗಿರುವ ಕಾರಣ ರಾಜ್ಯದಾದ್ಯಂತ ಸಾರ್ವಜನಿಕ ಸೇವೆ ರದ್ದು ಮಾಡಲಾಗಿದೆ. ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಗಳ ಸಂಚಾರ ಇರುವುದಿಲ್ಲ. ಈ ಕಾರಣಕ್ಕಾಗಿ ನಾಳೆ ನಡೆಯಬೇಕಿದ್ದ ಇಂಗ್ಲಿಷ್ ವಿಷಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲದೆ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.









