ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪದವಿ ಪೂರ್ವ ಶಿಕ್ಷಣ ಇಲಾಖೆ ಸೇವೆಗಳು ಸಕಾಲ ವ್ಯಾಪ್ತಿಗೆ..!

Kariyappa N by Kariyappa N
January 22, 2021
in Newsbeat, Politics, Samagra karnataka, ರಾಜ್ಯ
sakala
Share on FacebookShare on TwitterShare on WhatsappShare on Telegram

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಆಡಳಿತ ಚುರುಕುಗೊಳಿಸಲು ಉಪನ್ಯಾಸಕರ ಸೇವಾ ವಿಷಯಗಳನ್ನು ಸಕಾಲ ಯೋಜನೆ ವ್ಯಾಪ್ತಿಗೆ ತರಲು ಆಲೋಚಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸಂಘದ ಪದಾಧಿಕಾರಿಗಳೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಪಿಯು ಇಲಾಖೆಯಲ್ಲಿ ಸೇವಾ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಸಂಘಟನೆಗಳು ಗಮನಕ್ಕೆ ತಂದಿವೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಸೇವೆಗಳು ಕ್ಷಿಪ್ರಗತಿಯಲ್ಲಿ ದೊರೆಯುವಂತಾಗಲು ಇಲಾಖೆಯ ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲಾಗುತ್ತಿದೆ ಎಂದರು.

suresh kumar
ಪಿಯು ಉಪನ್ಯಾಸಕರ ವಿವಿಧ ಬೇಡಿಕೆಗಳ ಕುರಿತು ಮಾತನಾಡಿದ ಸಚಿವರು, ಪದವಿ ಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣೆಗೆ ಈಗಾಗಲೇ ಇರುವ ಕಾಯ್ದೆಯಡಿ ನಿಯಮ ರೂಪಿಸುವ ಕೆಲಸ ಪ್ರಗತಿಯಲ್ಲಿದ್ದು, ನಿಯಮಗಳನ್ನು ರೂಪಿಸಿದ ನಂತರ ವರ್ಗಾವಣೆ ಕೈಗೆತ್ತಿಕೊಳ್ಳಲಾಗುವುದು ಎಂದರು.
ಸೇವಾ ವಿಷಯಗಳಲ್ಲಿನ ವಿಳಂಬ ನಿರ್ವಹಣೆಗೆ ಕಡತ ವಿಲೇವಾರಿಗೆ ಇ-ಕಚೇರಿ ಬಳಕೆ ಮತ್ತು ಅಧಿಕಾರ ವಿಕೇಂದ್ರೀಕರಣ ಮಾಡಿ ವಿಳಂಬವಿಲ್ಲದೇ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಬಾಕಿ ಇರುವ ಕಡತಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪಿಯು ನಿರ್ದೇಶಕರಿಗೆ ಸೂಚಿಸಿದರು.

Related posts

instamart-sale-2026-iphone-17-pro-macbook-samsung-offers

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ, ಮ್ಯಾಕ್‌ಬುಕ್, ಸ್ಯಾಮ್ಸಂಗ್‌ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

October 14, 2026
bengaluru-airport-dasara-celebrations-2026

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ವಾರ ಪೂರ್ತಿ ನಡೆಯಲಿದೆ ಕಲೆ, ಸಂಸ್ಕೃತಿಯ ಅನಾವರಣ

October 14, 2026

ಮುಕ್ತ ವಿವಿ ಕುಲಪತಿಗಳೊಂದಿಗೆ ಚರ್ಚೆ
2007ರಿಂದೀಚೆಗೆ ಪದವಿ ಪೂರ್ವ ಉಪನ್ಯಾಸಕರ ಹುದ್ದೆಗೆ ಬಿ.ಇಡಿ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಹಾಲಿ ಸೇವೆಯಲ್ಲಿರುವ ಉಪನ್ಯಾಸಕರು ಬಿ.ಇಡಿ ಪಡೆಯಬೇಕಿದ್ದು, ಅದರಲ್ಲಿ 2357 ಮಂದಿ ಅನುದಾನಿತ ಕಾಲೇಜುಗಳ ಉಪನ್ಯಾಸಕರು ಬಿ.ಇಡಿ ಪಡೆಯುವುದು ಬಾಕಿಯಿರುವ ಹಿನ್ನೆಲೆಯಲ್ಲಿ ಈ ಎಲ್ಲ ಉಪನ್ಯಾಸಕರು ಏಕ ಕಾಲದಲ್ಲಿ ಬಿ.ಇಡಿ ಪಡೆಯಲು ಅನುವಾಗುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಒಂದು ಬಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿಗಳೊಂದಿಗೆ ಚರ್ಚಿಸಿದ್ದೇನೆ. ಉನ್ನತ ಶಿಕ್ಷಣ ಸಚಿವ ಡಿಸಿಎಂ ಡಾ. ಸಿ.ಎನ್. ಆಶ್ವತ್ಥ್ ನಾರಾಯಣ್ ಅವರೊಂದಿಗೆ ಈ ಸಂಬಂಧದಲ್ಲಿ ಚರ್ಚಿಸಲಾಗುವುದು ಎಂದರು.


ಕುಮಾರನಾಯ್ಕ ಸಮಿತಿ ಶಿಫಾರಸ್ಸಿನಂತೆ ಉನ್ನತ ಪದವಿ ಹೊಂದಿದ ಉಪನ್ಯಾಸಕರಿಗೆ ಬಡ್ತಿ ಸೇರಿದಂತೆ ವೇತನ ಬಡ್ತಿ ನೀಡಿಕೆ ಕುರಿತು ನಿರ್ಧಾರ ಕೈಗೊಳ್ಳಲು ಅಧಿಕಾರಿಗಳಿಗೆ ಕಡತ ಮಂಡಿಸುವಂತೆ ಸೂಚನೆ ನೀಡಿದ ಸಚಿವರು, ಪದವಿ ಕಾಲೇಜುಗಳಿಗೆ ಬಡ್ತಿ ನೀಡುವ ಕುರಿತಂತೆ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಬಿ.ಎಡ್ ವಿನಾಯ್ತಿ
ವೃತ್ತಿಶಿಕ್ಷಣ ಇಲಾಖೆಯಿಂದ ವಿಲೀನವಾಗಿರುವ ಪಿಯು ಉಪನ್ಯಾಸಕರು ಈಗಾಗಲೇ ನಿವೃತ್ತಿಗೆ ಸಮೀಪದಲ್ಲಿರುವುದು ಮತ್ತು ಅವರ ಅತಿ ಕಡಿಮೆ ಸಂಖ್ಯೆಯಲ್ಲಿರುವುದರಿಂದ ಅವರುಗಳಿಗೆ ಬಿ.ಇಡಿ ಪದವಿ ಪಡೆಯುವುದರಿಂದ ವಿನಾಯ್ತಿ ನೀಡಲು ಮತ್ತು ಖಾಯಂ ಪೂರ್ವ ಸೇವಾ ಅವಧಿ ಘೋಷಣೆ ಮಾಡಲು ಇಲಾಖೆಯಲ್ಲಿ ಅನುಕೂಲಕರವಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಕೇವಲ 7 ವರ್ಷಕ್ಕಿಂತ ಕಡಿಮೆ ಸೇವೆ ಇರುವ ಜೆಒಸಿ ವಿಲೀನ ಉಪನ್ಯಾಸಕರಿಗೆ ಬಿ.ಇಡಿ ವಿನಾಯ್ತಿ ನೀಡಲು ಪರಿಶೀಲಿಸಲಾಗುವುದು ಎಂದೂ ಸಚಿವರು ತಿಳಿಸಿದರು.
ಪ್ರಿನ್ಸಿಪಾಲರ ನೇರ ನೇಮಕ, ಉಪನ್ಯಾಸಕರಿಂದ ಪ್ರಾಚಾರ್ಯರ ಸ್ಥಾನಕ್ಕೆ ಮತ್ತು ಪ್ರಾಚಾರ್ಯರಿಂದ ಉಪನಿರ್ದೇಶಕರ ಸ್ಥಾನಕ್ಕೆ ಬಡ್ತಿ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಬೇಡಿಕೆಗಳನ್ನು ಸಂಘಟನೆಯ ಪದಾಧಿಕಾರಿಗಳು ಗಮನಕ್ಕೆ ತಂದಿದ್ದು, ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮ ವಹಿಸಬೇಕೆಂದು  ಸುರೇಶ್ ಕುಮಾರ್ ಇಲಾಖೆ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಮೌಲ್ಯಮಾಪನ ಸಹಕಾರಕ್ಕೆ ಮನವಿ
ಕೋವಿಡ್ ಸಾಂಕ್ರಾಮಿಕ ರೋಗದ ಪ್ರಸರಣದ ಹಿನ್ನೆಲೆಯಲ್ಲಿ ಈಗಾಗಲೇ ಪದವಿ ಪೂರ್ವ ಕಾಲೇಜುಗಳು ತಡವಾಗಿ ಆರಂಭವಾಗಿರುವುದರಿಂದ ಮಕ್ಕಳು ಪರೀಕ್ಷೆಯತ್ತ ಮುಖ ಮಾಡಿದ್ದು ಅಧ್ಯಯನದಲ್ಲಿ ತೊಡಗಿದ್ದಾರೆ. ನಿಗದಿತ ಅವಧಿಯಲ್ಲಿ ಪರೀಕ್ಷೆ ಆರಂಭವಾಗಲಿದ್ದು, ಈ ವಿಷಮ ಕಾಲಘಟ್ಟದಲ್ಲಿ ಉಪನ್ಯಾಸಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವಿಷಯದಲ್ಲಿ ಹೆಚ್ಚಿನ ಸಹಕಾರ ನೀಡಬೇಕೆಂದು ಕೋರಿದರು. ಇಂತಹ ಕಾಲಘಟ್ಟದಲ್ಲಿ ನಾವು ನಮ್ಮ ಮಕ್ಕಳಲ್ಲಿ ವಿಶ್ವಾಸ ಮೂಡಿಸಬೇಕಾಗಿರುವುದರಿಂದ ಮೌಲ್ಯಮಾಪನ ಬಹಿಷ್ಕಾರ ಸೇರಿದಂತೆ ಯಾವುದೇ ಪ್ರತಿಭಟನೆಗಳಿಗೆ ಮುಂದಾಗಬಾರದೆಂದೂ ಸಚಿವರು ಮನವಿ ಮಾಡಿದರು.

Tags: karnatakaPrimaru anf higher education departmentServices are come under sakalasuresh kumar
ShareTweetSendShare
Join us on:

Related Posts

instamart-sale-2026-iphone-17-pro-macbook-samsung-offers

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ, ಮ್ಯಾಕ್‌ಬುಕ್, ಸ್ಯಾಮ್ಸಂಗ್‌ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by admin
October 14, 2026
0

ಹಬ್ಬದ ಸೀಸನ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಅಥವಾ ಇಯರ್‌ಬಡ್ಸ್ ಖರೀದಿಸುವ ಪ್ಲಾನ್‌ನಲ್ಲಿದ್ದೀರಾ? ಹಾಗಾದರೆ ನಿಮಗೊಂದು ಸಿಹಿಸುದ್ದಿ. ಪ್ರಸಿದ್ಧ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ 'ಇನ್‌ಸ್ಟಾಮಾರ್ಟ್' ತನ್ನ ವರ್ಷದ ಅತಿದೊಡ್ಡ...

bengaluru-airport-dasara-celebrations-2026

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ವಾರ ಪೂರ್ತಿ ನಡೆಯಲಿದೆ ಕಲೆ, ಸಂಸ್ಕೃತಿಯ ಅನಾವರಣ

by admin
October 14, 2026
0

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರ್ನಾಟಕದ ಹೆಮ್ಮೆಯ ನಾಡಹಬ್ಬ ದಸರಾವನ್ನು ಅಕ್ಟೋಬರ್ 12ರಿಂದ 17ರವರೆಗೆ ವಾರಪೂರ್ತಿ ಸಾಂಸ್ಕೃತಿಕ ಸಂಭ್ರಮದೊಂದಿಗೆ ಆಚರಿಸಲು ಸಜ್ಜಾಗಿದೆ. ಬೆಂಗಳೂರಿನ ಹೆಬ್ಬಾಗಿಲಾಗಿರುವ ನಿಲ್ದಾಣವು,...

ai-dating-india-survey-aisle-dating-app

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ! ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

by admin
October 14, 2026
0

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಡೇಟಿಂಗ್ ಮಾಡೋದು ಅಷ್ಟೇನೂ ಸುಲಭವಲ್ಲ. ಒಂದು ತಪ್ಪು ಮೆಸೇಜ್ ಕಳುಹಿಸಿದರೂ ಬ್ರೇಕಪ್ ಗ್ಯಾರಂಟಿ. ಹೀಗಾಗಿ ಭಾರತದ ಸಿಂಗಲ್ಸ್, ಪ್ರೀತಿಯಲ್ಲಿ ಎಡವಟ್ಟಾಗದಂತೆ ತಡೆಯಲು...

jiopc-price-subscription-plans-india-jio-cloud-computer

ಜಿಯೋಪಿಸಿ ಈಗ ಎಲ್ಲರ ಕೈಗೆಟುಕುವ ರೀತಿಯಲ್ಲಿ ಲಭ್ಯ; ಕಂಪ್ಯೂಂಟಿಂಗ್ ಲೋಕದಲ್ಲಿ ಸಂಚಲನ

by admin
October 14, 2026
0

ಮುಂಬೈ,  ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಸುಧಾರಿತ ಕಂಪ್ಯೂಟಿಂಗ್ ಅನ್ನು ಹೆಚ್ಚು ಸುಲಭವಾಗಿ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ಜಿಯೋಪಿಸಿ (JioPC) ಮೂಲಕ ಜಿಯೋ ಇನ್ನಷ್ಟು...

jio-ai-glasses-upi-payments-live-translation-cricket-commentary-imc-2026

ಜಿಯೋ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಗ್ಲಾಸ್‌ಗಳಲ್ಲಿ ನೇರ ಕ್ರಿಕೆಟ್ ವೀಕ್ಷಕ ವಿವರಣೆ

by admin
October 14, 2026
0

ನೋಡಿ, ಮಾತನಾಡಿ, ಪಾವತಿಸಿ! ಜಿಯೋ ಎಐ ಗ್ಲಾಸ್‌ಗಳಿಂದ ನಿಮ್ಮ ಯುಪಿಐ ಪಾವತಿ ನವದೆಹಲಿ,  ನಿಮ್ಮ ಫೋನ್ ಹೊರ ತೆಗೆಯದೆಯೇ ಅಂಗಡಿಯಲ್ಲಿ ಪಾವತಿ ಮಾಡಲು ಸಾಧ್ಯವಾದರೆ ಹೇಗಿರುತ್ತದೆ? ಕ್ಯೂಆರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram