PU guest lectures – 3708 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ
ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಜೊತೆಗೆ ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅತಿಥಿ ಉಪನ್ಯಾಸಕರಿಗೆ ಈಗಿನ 9 ಸಾವಿರ ರೂ. ಗೌರವ ಸಂಭಾವನೆಯನ್ನು 12 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.
3708 ಅತಿಥಿ ಉಪನ್ಯಾಸಕರ ಹುದ್ದೆ ಭರ್ತಿ…
ರಾಜ್ಯ ಸರಕಾರವು ಒಟ್ಟು 3708 ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ. ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆ-3,271 ಮತ್ತು ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳ ಸಂಖ್ಯೆ-100. ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರ ಸಂಖ್ಯೆ 337 ಇದೆ. ಒಟ್ಟು 3708 ಹುದ್ದೆಗಳನ್ನು ಭರ್ತಿ ಮಾಡಲು ಸರಕಾರ ಅನುಮೋದನೆ ನೀಡಿದೆ.
ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ
ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದ್ದ ಮಾಸಿಕ ಗೌರವಧನವನ್ನು 9 ಸಾವಿರ ದಿಂದ 12 ಸಾವಿರ ರೂ.ಗೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ. PU guest lectures – Govt order for appointment of 3708 guest lecturers