ಬೆಂಗಳೂರು: ಎಣ್ಣೆ ಪ್ರಿಯಯರು ಎದುರು ನೋಡುತ್ತಿದ್ದ ದಿನ ಇಂದು ಕೊನೆಗೂ ಬಂದಿದೆ. ಅನ್‍ಲಾಕ್ 4.0 ಮಾರ್ಗಸೂಚಿ ಅನ್ವಯ ಇಂದಿನಿಂದ ಪಬ್, ಬಾರ್ ಮತ್ತು ರೆಸ್ಟೋರೆಂಟ್‍ಗಳ ಬಾಗಿಲು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಲಾಕ್‍ಡೌನ್ ಆದ 6 ತಿಂಗಳ ಬಳಿಕ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಕಳೆದ ಮೇ ತಿಂಗಳಿನಿಂದಲೇ ವೈನ್ ಶಾಪ್‍ಗಳು ತೆರೆದಿದ್ದವು. ಆದರೆ, ಕುಳಿತು ಮದ್ಯ ಸೇವನೆಗೆ ಅವಕಾಶ ಇರಲಿಲ್ಲ. ಕೇವಲ ಪಾರ್ಸೆಲ್‍ಗೆ ಮಾತ್ರ ಅನುಮತಿ ನೀಡಲಾಗಿತ್ತು.
ಇಂದಿನಿಂದ ಮದ್ಯ ಪ್ರಿಯರು ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ತಮಗಿಷ್ಟ ಬಂದಷ್ಟು ಹೊತ್ತು ಕುಳಿತು ಎಣ್ಣೆ ಏರಿಸಿಕೊಂಡು ಆಹಾರವನ್ನೂ ಸೇವಿಸಬಹುದಾಗಿದೆ.
ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿರುವ ಶೇ.50ರಷ್ಟು ಸೀಟಿಂಗ್ ಕ್ಯಾಪಸಿಟಿಗೆ ಮಾತ್ರ ಅವಕಾಶ ಕೊಡಲಾಗಿದೆ. ಲಾಕ್‍ಡೌನ್ ಹಾಗೂ ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಿದ್ದರಿಂದ ಆದಾಯ ಸಂಗ್ರಹಿಸುವ ದೃಷ್ಟಿಯಿಂದ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಪಬ್, ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಅಸ್ಸಾಂ, ಪಂಜಾಬ್, ರಾಜಸ್ಥಾನ ಹಾಗೂ ಹರಿಯಾಣ ರಾಜ್ಯಗಳು ಅನುಮತಿ ನೀಡಿದ್ದವು. ಈ ರಾಜ್ಯಗಳ ಮಾದರಿಯಲ್ಲೇ ಬಾರ್ ತೆರೆಯಲು ಅಮಮತಿ ನೀಡಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
*******
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








