ಚಿಕ್ಕಮಗಳೂರು : ಬಸ್ ನಿಲ್ದಾಣಕ್ಕಾಗಿ ಆಗ್ರಹಿಸಿದ್ದ ಜನರು ವಿನೂತನವಾಗಿ ಪ್ರತಿಭಟನೆ ನಡೆಸಿ, ಭಿಕ್ಷೆ ಬೇಡಿ ಬಸ್ ನಿಲ್ದಾಣ ನಿರ್ಮಿಸಿಕೊಂಡಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು (Chikkamagluru) ತಾಲೂಕಿನ ಶೃಂಗೇರಿ (Sringeri) ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿಯೇ ಈ ಘಟನೆ ನಡೆದಿದೆ.
ಇಲ್ಲಿಯ ಜನರು ಬಸ್ ನಿಲ್ದಾಣವಿಲ್ಲದೆ (Bus Stand) ಪರದಾಟ ನಡೆಸುತ್ತಿದ್ದರು. ಹೀಗಾಗಿ ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರು. ನೂರಾರು ಬಾರಿ ಈ ಕುರಿತು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಜನರೇ ಭಿಕ್ಷೆ ಬೇಡಿ ತಾತ್ಕಾಲಿಕ ಬಸ್ ನಿಲ್ದಾಣ ಕಟ್ಟಿಸಿದ್ದಾರೆ. ಹೀಗಾಗಿ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.