ಬೆಂಗಳೂರು: ನಗರದಲ್ಲಿನ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಾನೂನು ಉಲ್ಲಂಘಿಸಿರುವ 12 ಪಬ್, ಬಾರ್ ಗಳಿಗೆ ಬೀಗ ಹಾಕಿದ್ದಾರೆ.
ಬೃಹತ್ ಮಹಾನಗರ ಪಾಲಿಕೆಯ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ದಾಳಿ ಮಾಡಲಾಯಿತು. ಹಲವೆಡೆ ನಿಯಮ ಉಲ್ಲಂಘಿಸಿರುವುದು ಕಂಡು ಬಂದಿದ್ದು, ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ದಕ್ಷಿಣ, ಪಶ್ಚಿಮ, ಪೂರ್ವ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಯಲಹಂಕ, ಮಹದೇವಪುರ, ಬೊಮ್ಮನಹಳ್ಳಿ ವಲಯದಲ್ಲಿನ ಉದ್ದಿಮೆಗಳ ಮೇಲೆ ದಾಳಿ ನಡೆಸಲಾಗಿತ್ತು.
ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ ಈಗಾಗಲೇ 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೊಟೀಸ್ ಜಾರಿ ಮಾಡಲಾಗಿದ್ದು, 12 ವ್ಯಾಪಾರಿ ಮಳಿಗೆಗಳನ್ನು ಮುಚ್ಚಲಾಗಿದೆ.