PUC ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್, ಜೂನ್ 3 ವಾರದಲ್ಲಿ ಪ್ರಕಟ…
ಪಿಯುಸಿ ಪರೀಕ್ಷೆ (12ನೇ ತರಗತಿ) ಫಲಿತಾಂಶವನ್ನು ಜೂನ್ ತಿಂಗಳ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಾರಿ ಪಿಯುಸಿ ಪರೀಕ್ಷೆಯನ್ನು ಒಟ್ಟು 6,84,255 ವಿದ್ಯಾರ್ಥಿಗಳು ಎದುರಿಸಿದ್ದಾರೆ. ಇದರಲ್ಲಿ ಬಾಲಕರು-3,46,936, ಬಾಲಕಿಯರು-3,37,319 ಇದ್ದರೆ, ಒಟ್ಟಾರೆ ರೆಗ್ಯುಲರ್ ವಿದ್ಯಾರ್ಥಿಗಳು-6,00,519, ಪುನರಾವರ್ತಿತ ವಿದ್ಯಾರ್ಥಿಗಳು- 61,808, ಖಾಸಗಿ ವಿದ್ಯಾರ್ಥಿಗಳು – 21,928 ಜನ ಪರೀಕ್ಷೆ ಬರೆದಿದ್ದಾರೆ.