ನಾಳೆಯಿಂದ PUC ಪರೀಕ್ಷೆ, ಹಿಜಾಬ್ ಗೆ ನಿಷೇಧ, ಸಿಸಿಟಿವಿ ಕಣ್ಗಾವಲಲ್ಲಿ ಎಕ್ಸಾಮ್
ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಂತಿಮ ಹಂತದ ಸಿದ್ಧತೆಗಳನ್ನ ಮಾಡಿಕೊಳ್ಳಲಾಗುತ್ತಿದೆ.
ಈ ಬಾರಿ ಒಟ್ಟು 6,84,255 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಇದರಲ್ಲಿ ಬಾಲಕರು -3,46,936, ಬಾಲಕಿಯರು 3,37,319. ರೆಗ್ಯುಲರ್ ವಿದ್ಯಾರ್ಥಿಗಳು 6,00,519, ಪುನರಾವರ್ತಿತ ವಿದ್ಯಾರ್ಥಿಗಳು 61,808, ಖಾಸಗಿ ವಿದ್ಯಾರ್ಥಿಗಳು 21,928 ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಎಸ್ ಎಸ್ಎಲ್ ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ನಿಷೇಧ ಮಾಡಲಾಗಿದೆ. ಸಮವಸ್ತ್ರ ಇಲ್ಲದ ಕಾಲೇಜುಗಳಲ್ಲಿ ಯಾವುದೇ ಧರ್ಮ ಸೂಚಕ ಬಟ್ಟೆಯನ್ನ ಧರಿಸಿ ಬರದಂತೆ ಆದೇಶಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ ಆರ್ ಟಿಸಿ ಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆಗಳಲ್ಲಿ ಅಕ್ರಮ ನಡೆಯುವುದನ್ನು ತಡೆದು ಸುಗಮ ಪರೀಕ್ಷೆಗೆ ಅವಕಾಶ ಕಲ್ಪಿಸಲು ಪರೀಕ್ಷೆಗಳು ಸಿಸಿ ಟಿವಿ ಕಣ್ಗಾವಲಿನಲ್ಲಿ ನಡೆಯಲಿವೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ, ಹಾಗೆಯೇ ಪೊಲೀಸ್ ಬಂದೋಬಸ್ತ್‌ನ್ನು ನಿಯೋಜಿಸಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ೨೦೦ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ.