ಮಂಗಳೂರು : ಇಂದು ರಾಜ್ಯಾದ್ಯಂತ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಹೊರಬಿದ್ದಿದೆ. ಪಿಯುಸಿ ರಿಸಲ್ಟ್ ನಲ್ಲಿ ದಕ್ಷಿಣ ಕನ್ನಡ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಶೇಕಡಾ 86.02% ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅಂದ್ರೆ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 34,287 ವಿದ್ಯಾರ್ಥಿಗಳ ಪೈಕಿ 29,494 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಇನ್ನೂ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಬಾಸ್ಕೋಸ್ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ 592 ಅಂಕ ಪಡೆದಿದ್ರೆ, ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ವಿಕಾಸ್ ಕಾಲೇಜಿನ ವಿದ್ಯಾರ್ಥಿನಿ ಅಪೂರ್ವ 594 ಅಂಕ ಪಡೆದು ಸಾಧನೆ ಮಾಡಿದ್ದಾರೆ.
ರಾಜ್ಯದಂತೆ ಜಿಲ್ಲೆಯಲ್ಲೂ ವಿದ್ಯಾರ್ಥಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಒಟ್ಟು 17,189 ಜನ ವಿದ್ಯಾರ್ಥಿನಿಯರು ಹಾಜರಾಗಿದ್ದು, ಶೇಖಡಾ 90.53% ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ 17,098 ಬಾಲಕರ ಪೈಕಿ ಶೇ. 81.49 ರಷ್ಟು ತೇರ್ಗಡೆಗೊಂಡಿದ್ದಾರೆ. ನಗರ ಪ್ರದೇಶದಲ್ಲಿ ಶೇ. 89.33 ಹಾಗೂ ಗ್ರಾಮೀಣ ಭಾಗದಲ್ಲಿ ಶೇ. 79.85ರಷ್ಟು ಫಲಿತಾಂಶ ಹೊರಬಿದ್ದಿದೆ. ಕಲಾವಿಭಾಗ – 64.92% , ವಾಣಿಜ್ಯವಿಭಾಗ – 85.48%, ವಿಜ್ಞಾನವಿಭಾಗದಲ್ಲಿ – 93.69% ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.








