ಪಠ್ಯ ಕಡಿತಕ್ಕೆ ವಿದ್ಯಾರ್ಥಿಗಳ ಒತ್ತಾಯ
ಬೆಂಗಳೂರು : ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಪಠ್ಯ ಕಡಿತಕ್ಕೆ PUC ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. Amitabh Bachchan’s Delhi house ‘Sopaan’ sells off for ₹23cr
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪಠ್ಯವನ್ನು ಕಡಿತ ಮಾಡಲಾಗಿದೆ. ಹೀಗಾಗಿ ನಮಗೂ ಪರೀಕ್ಷ ಪಠ್ಯವನ್ನ ಕಡಿತ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಪೋಷಕರು ಬೆಂಬಲ ಸೂಚಿಸಿದ್ದಾರೆ.
ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ತರಗತಿಗಳು ವಿಳಂಬವಾಗಿ ಆರಂಭವಾಗಿದ್ದವು. ಇದೀಗ ಕೊರೊನಾ ಸೋಂಕಿನ ಮೂರನೇ ಅಲೆ ಎಂದು ಆನ್ ಲೈನ್ ತರಗತಿಗಳಲ್ಲಿ ಪಾಠ ಮಾಡಲಾಗಿದೆ. ಹೀಗಾಗಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಂತೆ ಈ ವರ್ಷದ ಪಿಯು ಮುಖ್ಯ ಪರೀಕ್ಷೆಯಲ್ಲಿ ಭಾಷಾ ವಿಷಯ ಮಾತ್ರವಲ್ಲ, ಐಚ್ಛಿಕ ಸಬ್ಜೆಕ್ಟ್ ಗಳಲ್ಲು 20% ಪಠ್ಯ ಕಡಿತ ಮಾಡಿ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಮನವಿ ಮಾಡಿದ್ದಾರೆ.
ಇತ್ತ ವಿದ್ಯಾರ್ಥಿಗಳ ಮನವಿ ಮೇಲೆ ಶಿಕ್ಷಣ ಇಲಾಖೆ ಪರಿಶೀಲನಾ ಸಭೆ ನಡೆಸುತ್ತಿದೆ. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹಾಗೂ ಪಿಯು ಬೋರ್ಡ್ ಅಧಿಕಾರಿಗಳು ಪಠ್ಯ ಕಡಿತದ ಬಗ್ಗೆ ಚರ್ಚೆ ನಡೆಸಿದ್ದಾರೆ.








