ಕಾಂಗ್ರೆಸ್ ಗೆ ಆಘಾತ : ಪುದುಚೇರಿಯಲ್ಲಿ ಸರ್ಕಾರ ಪತನ
ಪುದುಚೇರಿ : ಪುದುಚೇರಿ ರಾಜಕೀಯದಲ್ಲಿ ಭಾರಿ ಹೈಡ್ರಾಮ ನಡೆದಿದ್ದು, ಸಿಎಂ ನಾರಾಯಣ ಸ್ವಾಮಿ ಸರ್ಕಾರಕ್ಕೆ ಸೋಲಾಗಿದ್ದು, ಕಾಂಗ್ರೆಸ್ ಸರ್ಕಾರ ಪತನವಾಗಿದೆ.
ಕಾಂಗ್ರೆಸ್ ನಿಂದ ಸ್ಪರ್ಧಿಸಿ ನಾಲ್ಕು ಬಾರಿ ಶಾಸಕರಾಗಿದ್ದ ಲಕ್ಷ್ಮಿನಾರಾಯಣನ್ ಮತ್ತು ಡಿಎಂಕೆ ಶಾಸಕ ವೆಂಕಟೇಶನ್ ಅವರು ರಾಜೀನಾಮೆಯಿಂದಾಗಿ ನಾರಾಯಣ ಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು.
ಈ ಹಿನ್ನಲೆಯಲ್ಲಿ ಇಂದು ಸಿಎಂ ನಾರಾಯಣ ಸ್ವಾಮಿ ವಿಶ್ವಾಸ ಮತಯಾಚನೆ ಮಾಡಬೇಕಿತ್ತು.
ಈ ಕುರಿತಂತೆ ಇಂದು ನಡೆದ ವಿಶೇಷ ಅಧಿವೇಶನದಲ್ಲಿ ಸಿಎಂ ನಾರಾಯಣಸ್ವಾಮಿ ವಿಶ್ವಾಸಮತ ಯಾಚನೆಯ ಗೊತ್ತುವಳಿ ಮಂಡಿಸಿ ತಮ್ಮ ಸರ್ಕಾರಕ್ಕೆ ಬಹುಮತವಿದೆ ಎಂದು ಸಭೆಗೆ ತಿಳಿಸಿದರು.
ಇದೇ ವೇಳೆ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ವಿರುದ್ಧ ಕಿಡಿಕಾರಿದ ಅವರು, ಕಿರಣ್ ಬೇಡಿ ಆಡಳಿತಾತ್ಮಕ ವಿಷಯಗಳಲ್ಲಿ ಸರ್ಕಾರದೊಂದಿಗೆ ನಿರಂತರವಾಗಿ ಸಂಘರ್ಷಕ್ಕಿಳಿದರು.
ಆದ್ರೂ ನಾವು ಕೊರೊನಾ ಸಂಕಷ್ಟವನ್ನ ಸಮರ್ಥವಾಗಿ ನಿಭಾಯಿಸಿದ್ದೇವೆ. ಜನರಿಂದ ತಿರಸ್ಕಾರಕ್ಕೊಳಗಾದವರು ನಮ್ಮ ಸರ್ಕಾರವನ್ನು ಉರುಳಿಸಲು ಸಂಚು ನಡೆಸಿದ್ದಾರೆ. ಆದರೂ ನಮ್ಮ ಸರ್ಕಾರ ದೃಢವಾಗಿದೆ ಎಂದು ನಾರಾಯಣಸ್ವಾಮಿ ಆರೋಪಿಸಿದರು.
ಇದಾದ ಬಳಿಕ ವಿಶ್ವಾಸಮತಯಾಚನೆ ನಡೆಯಿತು. ಈಓ ವೇಳೆ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಸ್ಪೀಕರ್ ಘೋಷಿಸಿದರು.
ಆಗ ವಿಧಾನಸಭೆಯಿಂದ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಮತ್ತು ಕಾಂಗ್ರೆಸ್ ಸದಸ್ಯರು ಹೊರನಡೆದರು. ಈ ಮೂಲಕ ಕಾಂಗ್ರೆಸ್ ಸರ್ಕಾರ ಪತನಗೊಂಡಿತು.
ಇನ್ನು 33 ಸದಸ್ಯರನ್ನೊಳಗೊಂಡ ಸದನದಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಶಾಸಕರ ಸಂಖ್ಯೆ 11ಕ್ಕೆ ಕುಸಿದಿದೆ. ವಿರೋಧ ಪಕ್ಷ 14 ಶಾಸಕರನ್ನು ಹೊಂದಿದೆ. ಏಳು ಸ್ಥಾನಗಳು ಖಾಲಿ ಉಳಿದಿವೆ.