ಜನವರಿ 31ಕ್ಕೆ ಪಲ್ಸ್ ಪೋಲಿಯೋ ಕಾರ್ಯಕ್ರಮ
ನವದೆಹಲಿ : ಕೊರೊನಾ ಲಸಿಕೆ ವಿತರಣೆಗೆ ಚಾಲನೆ ಹಿನ್ನೆಲೆ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.
ಜನವರಿ 17ರಂದು ನಿಗದಿಯಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜನವರಿ 31ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಜನವರಿ 17ರಂದು ‘ರಾಷ್ಟ್ರೀಯ ಪೋಲಿಯೋ ರೋಗನಿರೋಧಕ ದಿನ’ವನ್ನಾಗಿ ಆಚರಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿತ್ತು.
ಆದರೆ ಜನವರಿ 16 ರಂದು ದೇಶಾದ್ಯಂತದ ಕೊರೊನಾ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾಗಲಿದೆ.
ಹೀಗಾಗಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಜನವರಿ 31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.
ಅಂದು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 11.45 ಕ್ಕೆ ಕೆಲವು ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುವ ಮೂಲಕ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel