Pulwama attack : ವೀರ ಯೋಧರ ಪರಮೊಚ್ಚ ತ್ಯಾಗವನ್ನ ದೇಶ ಎಂದಿಗೂ ಮರೆಯುವುದಿಲ್ಲ – ಪ್ರಧಾನಿ ಮೋದಿ…
ಜಮ್ಮು ಕಾಶ್ಮೀರ ಪುಲ್ವಾಮದಲ್ಲಿ 2019 ರಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯುಲ್ಲಿ ಪ್ರಾಣಕಳೆದುಕೊಂಡ ಕೇಂದ್ರೀಯ ಮೀಸಲು ಪೊಲೀಸ್ ಪಡೆ(CRPF) ಸಿಬ್ಬಂದಿಯನ್ನ ರಾಷ್ಟ್ರ ಗೌರವದಿಂದ ನೆನೆಸಿಕೊಳ್ಳುತ್ತಿದೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಡೆಸಿದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಗೆ ಇದೀಗ ನಾಲ್ಕು ವರ್ಷ. ಪುಲ್ವಾಮಾದ ಲೆಥ್‌ಪೋರಾದಲ್ಲಿ ಭದ್ರತಾ ಪಡೆ ಬೆಂಗಾವಲು ಪಡೆಯ ಮೇಲೆ ಆತ್ಮಹತ್ಯಾ ಬಾಂಬರ್ ಸ್ಫೋಟಕಗಳನ್ನ ತುಂಬಿದ್ದ ಕಾರನ್ನು ಚಲಾಯಿಸಿ ಬಾಂಬ್ ಸ್ಪೋಟಿಸಿದ್ದ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭೀಕರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾತೃಭೂಮಿಗಾಗಿ ಪ್ರಾಣ ಕಳೆದುಕೊಂಡ ಯೋಧರ ಶೌರ್ಯ ಮತ್ತು ತ್ಯಾಗವನ್ನು ಎಂದಿಗೂ ಮರೆಯಲಾಗದು ಮತ್ತು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವಂತೆ ಸಿನ್ಹಾ ಟ್ವೀಟ್ ಮಾಡಿದ್ದಾರೆ.
2019 ರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು. ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ನಮ್ಮ ವೀರ ಯೋಧರ ಪರಮೋಚ್ಚ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್‌ನಲ್ಲಿ ಮೋದಿ ಹೇಳಿದ್ದಾರೆ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಜನರನ್ನು ಪ್ರೇರೇಪಿಸುತ್ತದೆ ಎಂದು ಪ್ರಧಾನಿ ಹೇಳಿದರು.
Pulwama attack: The country will never forget the supreme sacrifice of brave soldiers – PM Modi…