ಪುಲ್ವಾಮಾ : ಭದ್ರತಾ ಪಡೆಗಳೊಂದಿಗೆ ಉಗ್ರರ ಚಕಮಕಿ – 3 ಉಗ್ರರ ಸಾವು, ಓರ್ವ ಭಾರತೀಯ ಯೋಧ ಹುತಾತ್ಮ
ಪುಲ್ವಾಮ, ಅಗಸ್ಟ್29: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯ ಯೋಧನೊಬ್ಬ ಹುತಾತ್ಮನಾಗಿದ್ದು, ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
![]()
ಒಂದು ಏಕೆ 47 ರೈಫಲ್ಸ್ ಮತ್ತು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಓರ್ವ ಸೈನಿಕ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾನೆ. ಜಂಟಿ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆಯ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಹೇಳಿದ್ದಾರೆ.

ಪುಲ್ವಾಮಾದ ಖಾದೂರಾ ಪ್ರದೇಶದಲ್ಲಿ ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸೈನ್ಯ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಎನ್ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದು, ಈ ಮೂಲಕ ಕಣಿವೆಯಲ್ಲಿ ಕೊಲ್ಲಲ್ಪಟ್ಟ ಒಟ್ಟು ಭಯೋತ್ಪಾದಕರ ಸಂಖ್ಯೆಯು 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಆರಕ್ಕೆ ಏರಿದೆ. ಓರ್ವ ಭಯೋತ್ಪಾದಕನನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ.








