ಕೊರೊನಾ ವೈರಸ್ ವಿರುದ್ದ ಇಡಿ ವಿಶ್ವವೇ ಹೋರಾಟ ನಡೆಸುತ್ತಿದೆ. ಈ ಹೋರಾಟಕ್ಕೆ ಭಾರತದಲ್ಲೂ ಸಾಕಷ್ಟು ಸಂಘ, ಸಂಸ್ಥೆಗಳು, ಸಿನಿಮಾ ಸ್ಟಾರ್ ಗಳು, ದಾನಿಗಳು, ಕೈ ಜೋಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ವಿರುದ್ದ ರಾಜಿ ರಹಿತ ಹೋರಾಟ ನಡೆಯುತ್ತಿದೆ. ಕರ್ನಾಟಕದಲ್ಲೂ ಸಹ ದಾನಿಗಳ ಸಂಖ್ಯೆ ಹೆಚ್ಚಿದೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೋಟಿ ಕೋಟಿ ಹಣ ದಾನಿಗಳಿಂದ ಜಮಾ ಆಗುತ್ತಿದೆ. ಕೊರೊನಾ ವೈರಸ್ ವಿರುದ್ದ ನಡೆಯುತ್ತಿರುವ ಹೋರಾಟಕ್ಕೆ ಕನ್ನಡ ಚಿತ್ರರಂಗದ ನಟರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಆ ದಿನಗಳ ಖ್ಯಾತಿಯ ಚೇತನ್ ಹಾಗೂ ನಿಖಿಲ್ ಕುಮಾರಸ್ವಾಮಿ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡಿದ್ದರು. ಇದೀಗ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಕನ್ನಡದ ಯುವರಾಜ ಪುನೀತ್ ರಾಜಕುಮಾರ್, ಡಾಲರ್ಸ್ ಕಾಲೋನಿಯಲ್ಲಿರುವ ಸಿ.ಎಂ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ಕೊರೊನಾ ವಿರುದ್ದ ನಡೆಯುತ್ತಿರುವ ಹೋರಾಟಕ್ಕೆ 50 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದರು. ಚೆಕ್ ಅನ್ನು ಸಿ. ಎಂ ಯಡಿಯೂರಪ್ಪ ಅವರ ಕೈಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಸ್ತಾಂತರಿಸಿದರು. ಈ ಸಮಯದಲ್ಲಿ ಡಿಸಿಎಂ ಅಶ್ವಥ್ ನಾರಯಣ್ ಇದ್ದರು.
https://twitter.com/CMofKarnataka/status/1244853052818874368








