Puneet raj kumar – ಪುನೀತ್ ಗೆ ನಾಳೆ ಕರ್ನಾಟಕ ರತ್ನ ಪ್ರದಾನ
ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಹಿಂದೆಯೇ ಘೋಷಿಸಿದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಾಳೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಈ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಯಂಗ್ ಟೈಗರ್ ಜ್ಯೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ.
ನಾಳೆ ಸಂಜೆ ನಾಲ್ಕು ಗಂಟೆಗೆ ವಿಧಾನಸೌಧ ಮುಂಭಾಗದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಕಾರ್ಯಕ್ರಮ ಸಂಜೆ ನಾಲ್ಕು ಗಂಟೆಗೆ ಶುರುವಾಗಲಿದ್ದು, ಮೊದಲು ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.
ಸಂಜೆ ಐದು ಗಂಟೆಗೆ ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತದೆ.