Puneeth Rajkumar
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸದ್ಯ ಯುವರತ್ನ ಸಿನಿಮಾದ ಚಿತ್ರೀಕರಣ ಮುಗಿಯುತ್ತಿದ್ದಂತೆ ಜೇಮ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಜೊತೆಗೆ ಅಪ್ಪು, ಸದ್ಯ ಕಾಳಿ ನದಿ ಕುರಿತ ಸಾಕ್ಷ್ಯ ಚಿತ್ರ ಚಿತ್ರೀಕರಣದಲ್ಲಿಯೂ ನಿರತರಾಗಿದ್ದಾರೆ. ಇಷ್ಟು ಬ್ಯುಸಿಯಿದ್ದರು ಸಹ ಪುನೀತ್ ರಾಜ್ ಕುಮಾರ್ ಅವರು ಬಿಡುವು ಮಾಡಿಕೊಂಡ ಅಲ್ಲಲ್ಲಿಕೆಲವು ತಾಣಗಳಿಗೆ ವಿಸಿಟ್ ಮಾಡ್ತಾ ಇರ್ತಾರೆ. ಇಂದು ಸಹ ಸಾಕ್ಷ್ಯ ಚಿತ್ರ ಚಿತ್ರೀಕರಣ ನಿಮಿತ್ತ ಪುನೀತ್ ತೆರಳಿರುವ ಅಪ್ಪು, ಉತ್ತರ ಕನ್ನಡ, ದಾಂಡೇಲಿ, ಧಾರವಾಡ ಸುತ್ತಾಡುತ್ತಿದ್ದಾರೆ. ಶೂಟಿಂಗ್ ಜೊತೆಗೆ ಐತಿಹಾಸಿಕ ಸ್ಥಳಗಳಿಗೂ ಭೇಟಿ ನೀಡುತ್ತಿದ್ದಾರೆ.
ಇತ್ತೀಚಿಗೆ ಪುನೀತ್ ಧಾರವಾಡದ ಐತಿಹಾಸಿಕ ನುಗ್ಗಿಕೇರಿ ಆಂಜನೇಯ ದೇವಸ್ಥಾನಕ್ಕೆ ಪತ್ನಿ ಅಶ್ವಿನಿ ಜೊತೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಸ್ಥಾನದ ವತಿಯಿಂದ ಪುನೀತ್ ರಾಜ್ ಕುಮಾರ್ ಅವರನ್ನು ಸನ್ಮಾನಿಸಲಾಗಿದೆ. ಈ ಹಿಂದೆ ಯುವರತ್ನ ಸಿನಿಮಾದ ಚಿತ್ರೀಕರಣದ ವೇಳೆಯೂ ಪುನೀತ್ ಅವರು ಈ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದ್ದರು.
ಹೆಣ್ಣು ಮಗಳಿಗೆ ಕೆಟ್ಟದಾಗಿ ಬೈದಿಲ್ಲ, ಬೈಯೋದೂ ಇಲ್ಲ : ಮುನಿರತ್ನ
ಸದ್ಯ ಪುನೀತ್ ರಾಜ್ ಕುಮಾರ್ ಅವರು ಸಾಲು ಸಾಲು ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಬಹುನಿರೀಕ್ಷಿತ ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ಒಂದಾಗಿರುವ ಜೇಮ್ಸ್ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಅಂದ್ಹಾಗೆ ಈ ಚಿತ್ರದಲ್ಲಿ ಪುನೀತ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಿಯಾ ಆನಂದ್ ಈಗಾಗಲೇ ರಾಜಕುಮಾರ ಸಿನಿಮಾದಲ್ಲಿ ಅಪ್ಪುಗೆ ನಾಯಕಿಯಾಗಿ ಅಭಿಮಾನಿಗಳನ್ನ ರಂಜಿಸಿ ಸೂಪರ್ ಹಿಟ್ ಜೋಡಿ ಆಗಿ ಹೊರಹೊಮ್ಮಿದ್ದಾರೆ.
Puneeth Rajkumar
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel