ಸಿನಿಮಾ ಕಾರ್ಮಿಕರ ನೆರವಿಗಾಗಿ 10 ಲಕ್ಷ ರೂ. ನೀಡಿದ ಪುನೀತ್ ರಾಜ್ ಕುಮಾರ್
ಬೆಂಗಳೂರು: ಕೊರೊನಾ 2ನೇ ಅಲೆಯ ತಡೆಗೆ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ನಿಂದಾಗಿ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದ್ರಲ್ಲೂ ಸಿನಿಮಾ ನಂಬಿಕೊಂಡೇ ಜೀವನ ನಡೆಸುತ್ತಿದ್ದ ಕಾರ್ಮಿಕರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.. ಈ ನಡುವೆ, ಉಪೇಂದ್ರ , ಕಿಚ್ಚ ಸುದೀಪ್ ,ಸಾಧುಕೋಕಿಲ , ರಾಕಿಂಗ್ ಸ್ಟಾರ್ ಸೇರಿದಂತೆ ಹಲವರು ಸಿನಿಮಾರಂಗದ ಕಾರ್ಮಿಕರು , ತಂತ್ರಜ್ಞರಿಗೆ ಸಹಾಯಾಸ್ತ ಚಾಚಿದ್ದಾರೆ.. ಇತ್ತೀಚೆಗ ನಟ ಯಶ್ 3000 ಕಾರ್ಮಿಕರ ಕುಟುಂಬಗಳಿಗೆ 5000 ಪರಿಹಾರ ಧನ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದರು..
ಬಾಲಿವುಡ್‌ನ ಅಣ್ಣಾ ಸುನಿಲ್ ಶೆಟ್ಟಿಯ ಪ್ರೇಮಕಥೆ
ಇದೀಗ ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಿನಿ ಕಾರ್ಮಿಕರ ಸಂಕಷ್ಟಕ್ಕೆ ಮಿಡಿದಿದ್ದು, ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ.ಗಳನ್ನು ನೀಡಿದ್ದಾರೆ. ಒಕ್ಕೂಟದ ಖಾತೆಗೆ ನೇರವಾಗಿ ಹಣವನ್ನು ಜಮೆ ಮಾಡಿದ್ದಾರೆ. ಈ ಕುರಿತು ಒಕ್ಕೂಟದ ಅಧ್ಯಕ್ಷ ಸಾ.ರಾ.ಗೋವಿಂದ್ ಅವರು ಮಾಹಿತಿ ನೀಡಿದ್ದು, ಪುನೀತ್ ರಾಜ್‍ಕುಮಾರ್ ಅವರು ಹಣ ನೀಡಿರುವುದನ್ನು ಖಚಿತಪಡಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.