puneeth rajkumar
ಸ್ಯಾಂಡಲ್ ವುಡ್ ತಾರೆಯರು ಆಗಾಗ ಸಮಾಜಮುಖಿ ಕಾರ್ಯಗಳನ್ನ ಮಾಡುತ್ತಾ ಇರುತ್ತಾರೆ. ಇದಕ್ಕೆ ದರ್ಶನ್ , ಪುನೀತ್ ರಾಜ್ ಕುಮಾರ್, ಸುದೀಪ್ ಅವರು ಹೊರತಾಗಿಲ್ಲ. ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂತಹದ್ದೇ ಒಂದು ಸಾಮಾಜಮುಖಿ ಕೆಲಸ ಮಾಡಿ ಅಭಿಮಾನಿಗಳ ಮನಗೆದ್ದಿದ್ದಾರೆ. 
ಇತ್ತೀಚಿಗೆ ಸರ್ಕಾರಿ ಶಾಲೆ ಅಭಿವೃದ್ಧಿಗೆ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ ಅಪ್ಪು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆ ಅಭಿವೃದ್ಧಿಗೆ ಪುನೀತ್ ರಾಜ್ ಕುಮಾರ್ 1 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರವನ್ನು ಸ್ವತಹ ಶಾಲೆಯೇ ಬಹಿರಂಗ ಪಡಿಸಿದೆ. ಪುನೀತ್ ಮತ್ತು ಜೇಮ್ಸ್ ಚಿತ್ರತಂಡಕ್ಕೆ ಅಭಿನಂದನಾ ಪತ್ರ ಬಿಡುಗಡೆ ಮಾಡಿ, ಧನ್ಯವಾದ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ ಮತ್ತು ಶಾಲೆಯ ಕಲಿಕಾ ವಾತಾವರಣವನ್ನು ಉತ್ತೇಜಿಸಲು ಹಾಗೂ ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ 1 ಲಕ್ಷ ರೂಪಾಯಿಯನ್ನು ಪ್ರೋತ್ಸಾಹ ಧನವಾಗಿ ನೀಡಿದ್ದಾರೆ ಎಂದು ಬಹಿರಂಗಪಡಿಸಿದೆ.
ಸದ್ಯ ಇತ್ತೀಚೆಗಷ್ಟೇ ಯುವರತ್ನ ಶೂಟಿಂಗ್ ಕಂಪ್ಲೀಟ್ ಮಾಡಿಕೊಂಡಿರುವ ಪುನೀತ್ ರಾಜ್ ಕುಮಾರ್ ಬಹುನಿರೀಕ್ಷೆಯ ಜೇಮ್ಸ್ ಚಿತ್ರದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಚಿತ್ರೀಕರಣವು ಭರ್ಜರಿಯಾಗಿ ನಡೆಯುತ್ತಿದೆ. ಕೊಪ್ಪಳ, ಬಳ್ಳಾರಿ, ಹೊಸಪೇಟೆಯಲ್ಲಿ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ. ಬ್ಯುಸಿ ಶೆಡ್ಯೂಲ್ ನಲ್ಲೂ ಬಿಡುವು ಮಾಡಿಕೊಂಡು ಅಪ್ಪು ಅನೇಕ ಕಾರ್ಯಗಳಲ್ಲಿ ತೊಡಗಿಸಿಕೊಮಡಿದ್ದಾರೆ. ಅಲ್ಲದೆ ಕೆಲ ತಾಣಗಳಿಗೂ ವಿಸಿಟ್ ಮಾಡ್ತಾಯಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿದ “ಖರಾಬು”..!
puneeth rajkumar
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








