ಪವರ್ ಸ್ಟಾರ್ ನಟನೆಯ ‘ಜೇಮ್ಸ್’ ಗೆ ಬಿಗ್ ಬಾಸ್ ವಿನ್ನರ್ ಎಂಟ್ರಿ..!
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಒಂದು.. ಲಾಕ್ ಡೌನ್ ಮುಗಿದ ಬೆನ್ನಲ್ಲೇ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು, ಇದೀಗ ಸಿಕ್ಕಿರುವ ಹೊಸ ಅಪ್ ಡೆಟ್ ನ ಪ್ರಕಾರ ಬಿಗ್ ಬಾಸ್ ಕನ್ನಡ ಸೀಸನ್ 7 ರ ವಿನ್ನರ್ ಶೈನ್ ಶೆಟ್ಟಿ ಸಹ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ..
ಚೇತನ್ ಕುಮಾರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಜೇಮ್ಸ್ ಸಿನಿಮಾದ ಶೂಟಿಂಗ್ ಮತ್ತೆ ಜುಲೈ 5ರಿಂದ ಆರಂಭವಾಗಿದೆ.. ಇತ್ತೀಚಿಗಷ್ಟೆ ಜೇಮ್ಸ್ ಚಿತ್ರಕ್ಕೆ ಘಟೋತ್ಕಚ ಖ್ಯಾತಿಯ ನಟ ಕೇತನ್ ಕರಾಂಡೆ ಎಂಟ್ರಿ ಕೊಟ್ಟಿದ್ದರು. ಇದರ ಬೆನ್ನಲ್ಲೇ ಈಗ ಶೈನ್ ಎಂಟ್ರಿ ಸಿನಿಮಾದ ಮೇಲೆ ಮತ್ತಷ್ಟು ಕುತೂಹಲವನ್ನ ಹೆಚ್ಚಿಸಿದೆ.
ಕಿರುತೆರೆಯಿಂದ ಬಣ್ಣದ ಲೋಕದ ಪಯಣ ಪ್ರಾರಂಭ ಮಾಡಿದ ಶೈನ್ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಕನ್ನಡ ಪ್ರೇಕ್ಷಕರ ಮನೆಮಾತಾಗಿದ್ದರು. ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿ ವಿನ್ನರ್ ಆಗಿ ಹೊರಹೊಮ್ಮಿದ್ದರು. ಬಳಿಕ ಹೆಚ್ಚಾಗಿ ಕಾಣಿಸಿಕೊಳ್ಳದ ಶೈನ್ ಇದೀಗ ಜೇಮ್ಸ್ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.
ರಾಜಕುಮಾರದಲ್ಲಿ ಅಪ್ಪುಗೆ ನಾಯಕಿಯಾಗಿದ್ದ ಪ್ರಿಯಾ ಆನಂದ್ ಮತ್ತೊಮ್ಮೆ ಈ ಸಿನಿಮಾದಲ್ಲಿ ಪುನೀತ್ ಗೆ ಜೋಡಿಯಾಗಿದ್ದಾರೆ.. ಇನ್ನೂ ಈ ಸಿನಿಮಾದ ನಂತರ ಪುನೀತ್ ರಾಜ್ ಕುಮಾರ್ ಅವರು ಹೊಂಬಾಳೆ ಫಿಲಮ್ಸ್ ಬ್ಯಾನರ್ ನಡಿ ಮೂಡಿಬರುತ್ತಿರುವ ವಿಶೇಷ ಕಥಾ ಹಂದರ ಹೊಂದಿರುವ ‘ದ್ವಿತ್ವ’ ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ.. ಈಗಾಗಲೇ ಈ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ವಿಭಿನ್ನ ಟೈಟಲ್ ಹಾಗೂ ಹೆಸರಿನಿಂದಲೇ ಗಮನ ಸೆಳೆಯುತ್ತಿದೆ..