ಮೈಸೂರಿನಲ್ಲಿ ನಿರ್ಮಾಣವಾಗಲಿರುವ ಚಿತ್ರನಗರಿಗೆ “ಅಪ್ಪು” ಹೆಸರಿಡುವ ಚಿಂತನೆ…!

1 min read

ಮೈಸೂರಿನಲ್ಲಿ ನಿರ್ಮಾಣವಾಗಲಿರುವ ಚಿತ್ರನಗರಿಗೆ “ಅಪ್ಪು” ಹೆಸರಿಡುವ ಚಿಂತನೆ…!

ಮೈಸೂರು:  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗಲಿರುವ ಚಿತ್ರನಗರಿಗೆ   ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಹೆಸರಿಡಲು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನಮ್ಮನಗಲಿದ ಪುನೀತ್ ರಾಜ್‍ಕುಮಾರ್ ಅವರಿಗೆ ಮೈಸೂರಿನಲ್ಲಿ ದೊಡ್ಡ ವೇದಿಕೆಯಲ್ಲಿ “ನುಡಿನಮನ” ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲು ನಡೆಸಿದ ಪೂರ್ವಭಾವಿ ಸಭೆಯ ನಂತರ ಸಚಿವರು ಈ ವಿಷಯ ಪ್ರಕಟಿಸಿದರು. ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲು ಉಪಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಗಳು ಚರ್ಚಿಸಿ ನೀಡುವ ಸಲಹೆಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲಾಗುವುದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಹ ಆಹ್ವಾನಿಸಲಾಗುವುದು ಎಂದು ಸಚಿವರು ಹೇಳಿದರು.puneeth-rajkumar

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯಲ್ಲಿರುವ ಬಯಲುರಂಗ ಮಂದಿರದಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು. ಕಾರ್ಯಕ್ರಮದಲ್ಲಿ ಪುನೀತ್ ರಾಜ್‍ಕುಮಾರ್ ಕುರಿತು ಪುಸ್ತಕ ಬಿಡುಗಡೆ ಮಾಡಲಾಗುವುದು. ಈ ಪುಸ್ತಕಕ್ಕೆ ಸಾರ್ವಜನಿಕರಿಂದ ಲೇಖನ ಆಹ್ವಾನಿಸಲಾಗುವುದು. ಅಭಿಮಾನಿಗಳು ಲೇಖನ ಕಳುಹಿಸಿಕೊಡಬಹುದು ಎಂದು ಮಾಹಿತಿ ಹಂಚಿಕೊಂಡರು.

ಸ್ನೇಹಿತರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ – ಫೋಟೋ ಶೇರ್ ಮಾಡಿಕೊಂಡ ಶ್ವೇತಾ ಚಂಗಪ್ಪ..!

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd