ಕೊರೊನಾ ಲಸಿಕೆ ಪಡೆದ ಅಪ್ಪು…! ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಕಿವಿಮಾತು..!
ಬೆಂಗಳೂರು: ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊರೊನಾ ಲಸಿಕೆ ಪಡೆದಿದ್ದಾರೆ. ಮೊದಲ ಡೋಸ್ ಪಡೆದಿರುವ ಅಪ್ಪು ಈ ಬಗ್ಗೆ ಟ್ವಿಟ್ಟರ್ ನಲ್ಲಿ ಫೋಟೋ ಶೇರ್ ಮಾಡಿಕೊಂಡು ಮಾಹಿತಿ ನೀಡಿದ್ದಾರೆ.
ಟ್ವೀಟ್ ಮಾಡಿರುವ ಪುನೀತ್ ರಾಜ್ ಕುಮಾರ್ ಅವರು ನನ್ನ ಮೊದಲ ಡೋಸ್ ವ್ಯಾಕ್ಸಿನೇಷನ್ ಇಂದು ಪಡೆದುಕೊಂಡಿದ್ದೇನೆ. ನೀವು 45 ವರ್ಷ ಹಾಗೂ ಮೇಲ್ಪಟ್ಟವರಾದರೆ ವ್ಯಾಕ್ಸಿನ್ ತೆಗೆದುಕೊಳ್ಳುದು ಮರೆಯಬೇಡಿ ಎಂದು ಬರೆದುಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಪತ್ನಿ ಸಹ ಕೊರೊನಾ ವ್ಯಾಕ್ಸಿನ್ ಪಡೆದಿದ್ದಾರೆ.