ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯಗೆ ತಪ್ಪಿನ ಅರಿವಾಗುವಂತಹ ಶಿಕ್ಷೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರವಾಗಿ ಅಮೂಲ್ಯ ಘೋಷಣೆ ಖಂಡಿಸಿ ಟ್ವೀಟ್ ಮಾಡಿರುವ ಮಾಜಿ ಸಿಎಂ,
ಭಾರತ ದೇಶದಲ್ಲಿದ್ದುಕೊಂಡು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ. ಪೆÇಲೀಸರು ಸರಿಯಾದ ತನಿಖೆ ನಡೆಸಿ ಆಕೆಗೆ ತನ್ನ ತಪ್ಪಿನ ಅರಿವಾಗುಂತಹ ಶಿಕ್ಷೆ ನೀಡಬೇಕು ಎಂದು ಬರೆದು ಒತ್ತಾಯಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆದ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಳು. ಇದೀಗಾ ಈ ಘೋಷಣೆಗೆ ದೇಶದೆಲ್ಲೆಡೆ ಭಾರೀ ವಿರೋಧವ್ಯಕ್ತವಾಗಿದೆ. ಈ ಬಗ್ಗೆ ಅಮೂಲ್ಯ ವಿರುದ್ಧ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.
ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ ನಡವಳಿಕೆ.
ಪೊಲೀಸರು ಸರಿಯಾದ ತನಿಖೆ ನಡೆಸಿ ಆಕೆಗೆ ತನ್ನ ತಪ್ಪಿನ ಅರಿವಾಗುಂತಹ ಶಿಕ್ಷೆ ನೀಡಬೇಕು.— Siddaramaiah (@siddaramaiah) February 21, 2020








