ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಅರೇಸ್ಟ್ Saaksha Tv
ಪಂಜಾಬ್: ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ANI ತಿಳಿಸಿದೆ,
ಶುಕ್ರವಾರ ಜಲಂಧರ್ ನಲ್ಲಿ ಅವರನ್ನು ED ಅಧಿಕಾರಿಗಳು ಬಂಧಿಸಿದ್ದಾರೆ. ಜನವರಿ 19 ರಂದು ಪಂಜಾಬ್‌ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಕಾರ್ಯಾಚರಣೆಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ತನಿಖೆಯಲ್ಲಿ ಇಡಿ ಅಧಿಕಾರಿಗಳು ಒಂದೇ ದಿನ ವಿವಿಧ ಕಡೆ ದಾಳಿ ನಡೆಸಿದ್ದರು. ಆಗ ಅಧಿಕಾರಿಗಳು ಭೂಪಿಂದರ್ ಸಿಂಗ್ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ದಾಳಿ ಸಮಯದಲ್ಲಿ ಮನೆಯಲ್ಲಿ 8 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಫೆಬ್ರವರಿ 2022 ರಂದು ಪಂಜಾಬ್ ವಿಧಾನಸಭಾ ಚುನಾವಣೆಯ ಮತ ಚಲಾಯಿಸುವ ಎರಡು ವಾರಗಳ ಮೊದಲು ಭೂಪಿಂದರ್ ಸಿಂಗ್ ಬಂಧನವಾಗಿದೆ.
ನವಾನ್‌ಶಹರ್ ಪೊಲೀಸರ 2018 ರ ಎಫ್‌ಐಆರ್ ಮತ್ತು ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿರುವ ಕಂಪನಿಗಳು ಮತ್ತು ವ್ಯಕ್ತಿಗಳ ವಿರುದ್ಧ ಇತರ ಕೆಲವು ಪೊಲೀಸ್ ದೂರುಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.