ಪಂಜಾಬ್ ಚುನಾವಣೆ | ಆಮ್ ಆದ್ಮಿ ಪಾರ್ಟಿಯ ಸಿಎಂ ಅಭ್ಯರ್ಥಿ ಯಾರು..?
ಚಂಡೀಗಢ : ಪಂಜಾಬ್ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ರಾಜಕೀಯ ಪಕ್ಷಗಳು ಚುನಾವಣಾ ಕೆಲಸಗಳನ್ನು ಈಗಾಗಲೇ ಆರಂಭಿಸಿವೆ.
ಈ ಬಾರಿ ಆಮ್ ಆದ್ಮಿ ಪಾರ್ಟಿ ಪಂಜಾಬ್ ಚುನಾವಣಾ ಅಖಾಡಕ್ಕೆ ಇಳಿಯಲಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪಂಜಾಬ್ ಪ್ರವಾಸ ಕೈಗೊಂಡಿದ್ದಾರೆ.
ಪಂಜಾಬ್ ನಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವ ಇರಾದೆ ಇಟ್ಟುಕೊಂಡಿರುವ ಆಮ್ ಆದ್ಮಿ ಪಾರ್ಟಿ ಇನ್ನೂ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.
ಈ ಬಗ್ಗೆ ಅರವಿಂದ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಮುಂದಿನ ವಾರ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ ಪಂಜಾಬ್ನಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದು ಚರಣ್ಜಿತ್ ಸಿಂಗ್ ಚನ್ನಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪಂಜಾಬ್ ವಿಧಾನಸಭಾ ಚುನಾವಣೆಗೆ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.