ಅಹಮದಾಬಾದ್: ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ತಂಡ ರೋಚಕ ಜಯ ಸಾಧಿಸಿದೆ.
ಅಶುತೋಷ್ ಶರ್ಮಾ ಹಾಗೂ ಶಶಾಂಕ್ ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ನಿಂದಾಗಿ ಪಂಜಾಬ್ ತಂಡ ಸೋತು ಗೆದ್ದಿದೆ. ಕೊನೆಯಲ್ಲಿ ಇವರಿಬ್ಬರ ಆರ್ಭಟದಿಂದಾಗಿ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತ್ತು. ಈ ಬೃಹತ್ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 19.5 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 200 ರನ್ ಪೂರೈಸಿ ಗೆಲುವು ಸಾಧಿಸಿದೆ. ಗುಜರಾತ್ ಪರ ನಾಯಕ ಶುಭಮನ್ ಗಿಲ್ 89, ಸಾಯಿ ಸುದರ್ಶನ್ 33, ಕೇನ್ಸ್ ವಿಲಿಯಮ್ಸನ್ 22 ರನ್ ಗಳಿಸಿದ್ದರು.
ಪಂಜಾಬ್ ಪರ ಶಶಾಂಕ್ ಸಿಂಗ್ ಭರ್ಜರಿ ಆಟ ಆಡಿದ್ದು ಕೇವಲ 29 ಬೌಲ್ ಗಲಲ್ಲಿ 61 ರನ್ ಗಳಿಸಿ ಗೆಲುವಿಗೆ ಆಸರೆಯಾದರು.








