ಚಂಡೀಗಢ: ಯದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಮತ್ತೊಮ್ಮೆ ಹೋರಾಡಿ ಸೋಲು ಕಂಡಿದೆ.
ಮುಂಬೈ ತಂಡ ಪಂಜಾಬ್ ವಿರುದ್ಧ 9 ರನ್ ಗಳಿಂದ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿತು. ಗುರಿ ಬೆನ್ನಟ್ಟಿದ್ದ ಪಂಜಾಬ್ ತಂಡ 19.1 ಓವರ್‌ಗಳಲ್ಲಿ 183 ರನ್ ಗಳಿಸಿ ಎಲ್ಲ ಆಲೌಟ್ ಆಗಿ ಸೋಲು ಕಂಡಿತು.
ಮುಂಬೈ ಇಂಡಿಯನ್ಸ್ ನೀಡಿದ 193 ರನ್ ಗುರಿ ಹಿಂಬಾಲಿಸಿದ ಪಂಜಾಬ್ ಕಿಂಗ್ಸ್ 7 ಓವರ್‌ಗಳಿಗೆ 5 ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿ ಆರಂಭಿಕ ಆಘಾತ ಅನುಭವಿಸಿತ್ತು. ಆದರೆ, ತಂಡದ ಪರ ಭರ್ಜರಿ ಹೋರಾಟ ನಡೆಸಿದ ಅಶುತೋಷ್ ಶರ್ಮಾ 28 ಎಸೆತಗಳಲ್ಲಿ 7 ಸಿಕ್ಸರ್ 2 ಬೌಂಡರಿ ಗಳಿಸಿ 61 ರನ್ ಗಳಿಸಿದರು. ಶಶಾಂಕ್ ಸಿಂಗ್ 25 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 2 ಬೌಂಡರಿಗಳ ನೆರವಿನಿಂದ 41 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಹರ್ಪ್ರೀತ್ ಬ್ರಾರ್ 20 ಎಸೆತಗಳಲ್ಲಿ 21 ರನ್ ಗಳಿಸಿದರು.
ಮುಂಬೈ ಪರ ಆರಂಭಿಕ ಆಟಗಾರ ಇಶಾನ್ ಕಿಶನ್ 8 ಎಸೆತಗಳಲ್ಲಿ 8ರನ್ ಗಳಿಸಿ ಮೊದಲ ಆಘಾತ ನೀಡಿದರು. ರೋಹಿತ್ ಶರ್ಮಾ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 36 ರನ್ ಗಳಿಸಿದರು. ಅಲ್ಲದೇ, ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಬರೆದಿದ್ದಾರೆ. ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ 224 ಸಿಕ್ಸರ್ ಸಿಡಿಸಿದ್ದಾರೆ. ಮುಂಬೈ ತಂಡದ ಪರ ಕೀರಾನ್ ಪೊಲಾರ್ಡ್ ಐಪಿಎಲ್‌ನಲ್ಲಿ 223 ಸಿಕ್ಸರ್ ಸಿಡಿಸಿದ್ದರು. ಇದು ರೋಹಿತ್ ಗೆ 250 ರನ್ ಗಳಿಸಿದರು.
ಸೂರ್ಯ ಕುಮಾರ್ 53 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 78 ರನ್ ಗಳಿಸಿದರು. ಹಾರ್ದಿಕ್ ಮತ್ತೊಮ್ಮೆ ವಿಫಲರಾದರು. ಕೇವಲ 10 ರನ್ ಗಳಿಸಿದರು. ಮುಂಬೈ ಪರ ಬೌಲಿಂಗ್ ನಲ್ಲಿ ಜಸ್ಪ್ರೀತ್ ಬಮ್ರಾ 21 ರನ್ ನೀಡಿ 3 ವಿಕೆಟ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.