SRH vs PBKS | ಪಂಜಾಬ್ vs ಹೈದರಾಬಾದ್ : ಹೆಡ್ ಟು ಹೆಡ್ ರೆಕಾರ್ಡ್ ಹೇಗಿದೆ.?
15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮ್ಯಾಚ್ ನಂಬರ್ 28ರಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ.
ಮಧ್ಯಾಹ್ನ 3.30ಕ್ಕೆ ಡಿ.ವೈ. ಪಾಟೀಲ್ ಅಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಗೆಲುವಿಗಾಗಿ ಉಭಯ ತಂಡಗಳು ಪೈಪೋಟಿ ನಡೆಸಲಿವೆ.
ಟೂರ್ನಿಯಲ್ಲಿ ಎರಡೂ ತಂಡಗಳು ಐದು ಪಂದ್ಯಗಳನ್ನಾಡಿದ್ದು, ತಲಾ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಐದನೇ ಸ್ಥಾನದಲ್ಲಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡ ಏಳನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು, ಅಂಕಪಟ್ಟಿಯಲ್ಲಿ ಮೇಲೆರುವ ಪ್ಲಾನ್ ಮಾಡಿಕೊಂಡಿವೆ.
ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಈ ವರೆಗೂ ಈ ಎರಡು ತಂಡಗಳು 18 ಪಂದ್ಯಗಳಲ್ಲಿ ಮುಖಾಮುಖಿಯಾಗವೆ. ಈ ಪೈಕಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮೇಲು ಗೈ ಸಾಧಿಸಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪಂಜಾಬ್ ಕಿಂಗ್ಸ್ ತಂಡ ಆರು ಪಂದ್ಯಗಳಲ್ಲಿ ಗೆಲುವು ದಾಖಲಿಸಿವೆ.
ಇನ್ನು ಕಳೆದ ಐದು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಎರಡು ಪಂದ್ಯಗಳಲ್ಲಿ ಗೆದ್ದಿದ್ದು, ಸನ್ ರೈಸರ್ಸ್ ಹೈದರಾಬಾದ್ ಮೂರು ಪಂದ್ಯಗಳಲ್ಲಿ ಗೆದ್ದಿದೆ.
ಕಳೆದ ವರ್ಷದ ಟೂರ್ನಿಯಲ್ಲಿ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ.
ಇನ್ನು ಮೊದಲ ಬ್ಯಾಟಿಂಗ್ ಮಾಡಿದಾಗ ಪಂಜಾಬ್ ಕಿಂಗ್ಸ್ ನಾಲ್ಕು ಬಾರಿ ಗೆದ್ದಿದ್ದರೇ ಏಂಟು ಬಾರಿ ಸನ್ ರೈಸರ್ಸ್ ತಂಡ ಜಯ ಸಾಧಿಸಿದೆ. ಸೆಕೆಂಡ್ ಬ್ಯಾಟಿಂಗ್ ಮಾಡಿದಾಗ ಪಂಜಾಬ್ ಕಿಂಗ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ. ಎಸ್ ಆರ್ ಹೆಚ್ 4 ಪಂದ್ಯದಲ್ಲಿ ಗೆದ್ದಿದೆ.