ಉತ್ತರಾಖಂಡ್ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ Pushkar Singh Dhami
ಡೆಹ್ರಾಡೂನ್ : ಮುಖ್ಯಮಂತ್ರಿ ಸ್ಥಾನಕ್ಕೆ ತೀರ್ಥ್ ಸಿಂಗ್ ರಾವತ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉತ್ತರಾಖಂಡದ ಮುಂದಿನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅವರು ಆಯ್ಕೆ ಆಗಿದ್ದಾರೆ.
ನಿನ್ನೆ ತೀರ್ಥ್ ಸಿಂಗ್ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈ ಹಿನ್ನಲೆ ಇಂದು ಹೊಸ ಶಾಸಕಾಂಗ ಪಕ್ಷದ ನಾಯಕ ಆಯ್ಕೆಗೆ ವೀಕ್ಷಕರಾಗಿ ಹೈಕಮಾಂಡ್ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಕಳುಹಿಸಿತ್ತು.
ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ನರೇಂದ್ರ ಸಿಂಗ್ ತೋಮರ್ ಶಾಸಕರ ಒಪ್ಪಿಗೆ ಮೇರೆಗೆ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.
ಪುಷ್ಕರ್ ಸಿಂಗ್ ಧಾಮಿ ಖತೀಮ್ ಕ್ಷೇತ್ರದ ಹಾಲಿ ಶಾಸಕರಾಗಿದ್ದು, ಶೀಘ್ರದಲ್ಲೇ ಉತ್ತರಾಖಂಡನ ಹತ್ತನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.