ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡದ ನೂತನ ಮುಖ್ಯಮಂತ್ರಿ..!
ಉತ್ತರಾಖಂಡ್ : ಕಳೆದ 4 ತಿಂಗಳ ಹಿಂದೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದ ತೀರ್ಥ್ ಸಿಂಗ್ ಅವರು ಹೈಕಮಾಂಡ್ ಸೂಚನೆಯಂತೆ ಇತ್ತೀಚೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.. ಬಳಿಕ ಉತ್ತರಾಖಂಡ ಮುಂದಿನ ಮುಖ್ಯಮಂತ್ರಿಗಳು ಯಾರೂ ಎಂಬ ಗೊಂದಲಗಳಿದ್ದವು.. ಅನೇಕರು ಸಿಎಂ ಸ್ಥಾನಕ್ಕಾಗಿ ರೇಸ್ ನಲ್ಲಿದ್ದರು..
ಅಂತಿಮವಾಗಿ 45 ವರ್ಷದ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವುದು ಬಹುತೇಕ ಖಚಿತವಾಗಿದೆ.. ರಾಜ್ಯ ವಿಧಾನಸಭೆಗೆ ನಿಗದಿತ ಅವಧಿಯಲ್ಲಿ ನಿಯಮಾನುಸಾರ ಆಯ್ಕೆಯಾಗದ ಕಾರಣ ಹಾಲಿ ಮುಖ್ಯಮಂತ್ರಿ ತೀರ್ಥ್ ಸಿಂಗ್ ರಾವತ್ ಅವರು ಶುಕ್ರವಾರ ರಾಜೀನಾಮೆಯನ್ನು ಸಲ್ಲಿಸಿದ್ದರು. ಹೀಗಾಗಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಧಾಮಿ ಆಯ್ಕೆಯಾಗಿದ್ದು, ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿಯಾಗಿ, ಸರ್ಕಾರ ರಚನೆಗೆ ತಮ್ಮ ಹಕ್ಕು ಪ್ರತಿಪಾದಿಸಲಿದ್ದಾರೆ.
ವಿಧಾನಸಭೆಯಲ್ಲಿ ಖಾತಿಮಾ ಕ್ಷೇತ್ರವನ್ನು ಪ್ರತಿನಿಧಿಸುವ ಧಾಮಿ ಅವರು ವಿದ್ಯಾರ್ಥಿಯಾಗಿದ್ದಾಗ ಎಬಿವಿಪಿ ಜೊತೆಗೆ ಗುರುತಿಸಿಕೊಂಡಿದ್ದು, ಉತ್ತರಾಖಂಡದ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 2000ರಲ್ಲಿ ಉತ್ತರಾಖಂಡ ರಾಜ್ಯ ಸ್ಥಾಪನೆಯಾದಾಗ ಸಕ್ರಿಯ ರಾಜಕಾರಣವನ್ನು ಪ್ರವೇಶಿಸಿದ್ದರು.