ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ 2’ (Pushpa 2) ಸಿನಿಮಾ ಕುರಿತು ಅಭಿಮಾನಿಗಳಿಗೆ ದೊಡ್ಡ ಅಪ್ಡೇಟ್ ಸಿಕ್ಕಿದೆ.
ಚಿತ್ರ ತಂಡವು ಅಭಿಮಾನಿಗಳಿಗಾಗಿ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಪೋಸ್ಟರ್ ಕಂಡು ಅಭಿಮಾನಿಗಳು ತುಂಬಾ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಪುಷ್ಪ 2’ ಹೊಸ ಪೋಸ್ಟರ್ ನಲ್ಲಿ ಅಲ್ಲು ಅರ್ಜುನ್ (Allu Arjun) ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ನಲ್ಲಿ ಫಸ್ಟ್ ಹಾಫ್ ಲಾಕ್ ಮತ್ತು ಲೋಡ್ ಫುಲ್ ಫೈರ್ ಎಂದು ಶೀರ್ಷಿಕೆ ಇದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ರಿವೀಲ್ ಮಾಡಿಲ್ಲ. ಆದರೆ, ಪೋಸ್ಟರ್ ಲುಕ್ ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಈ ಚಿತ್ರ ಇದೇ ವರ್ಷದ ಡಿಸೆಂಬರ್ 6ರಂದು ಬಿಡುಗಡೆಗೆ ಸಿದ್ಧವಾಗುತ್ತಿದೆ.
ಆದರೆ, ಇತ್ತೀಚೆಗಷ್ಟೇ ಡಿ.6ರಂದು ಬಿಡುಗಡೆ ಆಗುವುದಿಲ್ಲ ಎನ್ನಲಾಗಿತ್ತು. ಆದರೆ, ಈ ಮಧ್ಯೆ ಚಿತ್ರದ ಕುರಿತು ಪೋಸ್ಟರ್ ಬಿಡುಗಡೆ ಮಾಡಿದ್ದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.