ಅಲ್ಲು ಅರ್ಜುನ್ ನಟಿಸಿದ್ದ ಪುಷ್ಪ ಚಿತ್ರ ಭರ್ಜರಿ ಯಶಸ್ಸು ಪಡೆಯುತ್ತಿದ್ದಂತೆ ಪುಷ್ಪ 2 ಚಿತ್ರಕ್ಕೆ ಚಾಲನೆ ನೀಡಲಾಯಿತು. ಈಗ ಈ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಭರ್ಜರಿ ಅಪ್ಡೇಟ್ ವೊಂದು ಸಿಕ್ಕಿದೆ.
ಚಿತ್ರವನ್ನು ಅಂದುಕೊಂಡ ಸಮಯಕ್ಕೆ ಬಿಡುಗಡೆ ಮಾಡಬೇಕೆಂದು ನಿರ್ದೇಶಕ ಸುಕುಮಾರ್ ಕೆಲಸ ಮಾಡುತ್ತಿದ್ದಾರೆ. ಆದರೆ, ಈಗ ಸಿಕ್ಕ ವರದಿಯಂತೆ ಒಂದು ಪ್ರಮುಖ ದೃಶ್ಯಕ್ಕೆ ತಂಡ ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಈ ವಿಚಾರ ಕೇಳಿ ಅಭಿಮಾನಿಗಳು ರೋಮಾಂಚನಗೊಳ್ಳುತ್ತಿದ್ದಾರೆ.
ಪುಷ್ಪ ಚಿತ್ರವು 2021ರಲ್ಲಿ ಬಿಡುಗಡೆಯಾಗಿದ್ದು, ಬರೋಬ್ಬರಿ 300 ಕೋಟಿ ರೂಪಾಯಿ ಗಳಿಸಿತ್ತು. ಹೀಗಾಗಿ ಎರಡನೇ ಪಾರ್ಟ್ ಬರುತ್ತಿದ್ದು, ಮೈತ್ರಿ ಮೂವೀ ಮೇಕರ್ಸ್ ಯಾವುದೇ ರಾಜಿ ಮಾಡಿಕೊಳ್ಳದೆ ನಿರ್ದೇಶಕರು ಕೇಳಿದಷ್ಟು ಹಣವನ್ನು ಚೆಲ್ಲುತ್ತಿದ್ದಾರೆ ಎನ್ನಲಾಗುತ್ತಿದೆ.
ಪುಷ್ಪ 2 ಸಿನಿಮಾದಲ್ಲಿ ಇಂಟರ್ ವಲ್ ಗೂ ಮೊದಲು 30 ನಿಮಿಷಗಳ ದೃಶ್ಯವೊಂದು ಬರಲಿದೆ. ಇದಕ್ಕಾಗಿ ಬರೋಬ್ಬರಿ 35 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಈ ದೃಶ್ಯ ಸೆರೆಹಿಡಿಯಲು ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚಾಗಿದೆ ಎನ್ನಲಾಗಿದೆ. 30 ನಿಮಿಷಗಳಲ್ಲಿ ಒಂದು ಸಾಂಗ್, ಫೈಟ್ ಹಾಗೂ ಭಾವನಾತ್ಮಕ ದೃಶ್ಯಗಳು ಇರಲಿವೆ. ಈ ಚಿತ್ರದ ಬಜೆಟ್ 500 ಕೋಟಿ ರೂಪಾಯಿ ಎನ್ನಲಾಗಿದೆ. ಅಭಿಮಾನಿಗಳು ಈ ಚಿತ್ರಕ್ಕೆ ಯಾವ ರೀತಿ ರೆಸ್ಪಾನ್ಸ್ ನೀಡುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.








