ಅಕ್ಟೋಬರ್ 28ಕ್ಕೆ ಪುಷ್ಟ ಮೂರನೇ ಸಾಂಗ್.. pushpa saaksha tv
ಸುಕುಮಾರ್ ನಿರ್ದೇಶನದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾದ ಸಿನಿಮಾ ಪುಷ್ಪ ರಿಲೀಸ್ ಗೂ ಮುನ್ನವೇ ಭಾರಿ ಸದ್ದು ಮಾಡುತ್ತಿದೆ.
ಈಗಾಗಲೇ ಬಿಡುಗಡೆಯಾಗಿರುವ ಎರಡು ಸಾಂಗ್ ಗಳು ಸೋಶಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಟ್ರೈಲರ್ ಗೂ ಬೊಂಬಾಟ್ ರೆಸ್ಪಾನ್ಸ್ ಸಿಕ್ಕಿದ್ದು, ಸಿನಿಮಾದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.
ಈ ಮಧ್ಯೆ ಚಿತ್ರತಂಡ ಮತ್ತೊಂದು ಅಪ್ ಡೇಟ್ ನೀಡಿದ್ದು, ಅಕ್ಟೋಬರ್ 28ಕ್ಕೆ ಸಿನಿಮಾ ಮೂರನೇ ಸಾಂಗ್ ರಿಲೀಸ್ ಮಾಡಲಿದೆಯಂತೆ.
ಈ ಕುರಿತು ಸಿನಿಮಾದ ನಿರ್ಮಾಪಕರು ಮಾಹಿತಿ ನೀಡಿದ್ದು, ಮೂರನೇ ಸಾಂಗ್ ನ ಪ್ರೋಮೋ ಹಂಚಿಕೊಂಡಿದ್ದಾರೆ. ಪ್ರೋಮೋ ಹಾಡನ್ನು ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆ ಮಾಡಲಾಗಿದೆ.
ಕೆಂಪು ಶ್ರೀಗಂಧದ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದ್ದು, ದೇವಿಶ್ರೀ ಪ್ರಸಾದ್ ಅವರ ಸಂಗೀತದೊಂದಿಗೆ ಮೈತ್ರಿ ಮೂವಿ ಮೇಕರ್ಸ್ ಸಿನಿಮಾವನ್ನು ನಿರ್ಮಿಸುತ್ತಿದೆ.
ಎರಡು ಭಾಗಗಳಲ್ಲಿ ತೆರೆಗೆ ಬರಲಿರುವ ಸಿನಿಮಾದ ಮೊದಲ ಭಾಗ ಡಿಸೆಂಬರ್ 17ಕ್ಕೆ ತೆರೆಗೆ ಬರಲು ಸಜ್ಜಾಗಿದೆ.