ಒಂದೇ ಭಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ ಒಡಿಶಾ ಮಹಿಳೆ
ತಾಯಿಯೊಬ್ಬಳು ಒಂದೇ ಭಾರಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿರುವ ವೀರ್ ಸುರೇಂದ್ರ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದಿದೆ.
ಮಹಿಳೆಯನ್ನು ಸೋನೆಪುರ್ ಜಿಲ್ಲೆಯ ಬಂಜಿಪಾಲಿ ಗ್ರಾಮದ ಕುನಿ ಸುನಾ ಎಂದು ಗುರುತಿಸಲಾಗಿದೆ. ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ನಂತರ ವಿಮ್ಸಾರ್ನಲ್ಲಿರುವ ಪ್ರಸೂತಿ ಮತ್ತು ಸ್ತ್ರೀರೋಗ ಇಲಾಖೆಗೆ ದಾಖಲಿಸಲಾಗಿತ್ತು.
ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ನವಜಾತ ಶಿಶುಗಳಲ್ಲಿ ಮೂರು ಹೆಣ್ಣು ಮತ್ತು ಒಂದು ಮಗುವಿಗೆ ಜನ್ಮ ನೀಡಿದ್ದಾರೆ.
ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮಧ್ಯಾಹ್ನ 2 ಗಂಟೆ ಸುಮಾರಿಗೆ ಎರಡು ಹೆಣ್ಣು ಶಿಶುಗಳಿಗೆ 2.02 ಕ್ಕೆ ಮತ್ತೊಂದು ಹೆಣ್ಣು ಮತ್ತು 2.04 ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಜನನದ ನಂತರ, ನವಜಾತ ಶಿಶುಗಳು ಕಡಿಮೆ ತೂಕವನ್ನು ಹೊಂದಿದ್ದರಿಂದ ವಿಶೇಷ ನವಜಾತ ಆರೈಕೆ ಘಟಕದಲ್ಲಿ (SNCU) ಇರಿಸಲಾಗಿದೆ.