ಬೆಂಗಳೂರು : ತಂದೆ, ಪತ್ನಿ ಹಾಗೂ ಮಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಹಿನ್ನೆಲೆ ಸಚಿವ ಕೆ. ಸುಧಾಕರ್ ಅವರು ಹೋ ಕ್ವಾರಂಟೈನ್ ನಲ್ಲಿದ್ದಾರೆ. ಆದರೂ ತಮ್ಮ ಕೊರೊನಾ ವಿರುದ್ಧದ ಹೋರಾಟ ನಿಲ್ಲಿಸದ ಸುಧಾಕರ್, ಸಾಮಾಜಿಕ ಜಾಲತಾಣವನ್ನು ಉಪಯೋಗಿಸಿಕೊಂಡು ಮನೆಯಲ್ಲೇ ಕುಳಿತು ಕೆಲಸ ಮಾಡುತ್ತಿದ್ದಾರೆ.
ಹೌದು..! ಮನೆಯಲ್ಲೇ ಕುಳಿತು ಕರ್ತವ್ಯ ನಿರ್ವಹಿಸಿರುವ ಸುಧಾಕರ್, ಈ ಬಗ್ಗೆ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. “ಗೃಹ ಕ್ವಾರಂಟೈನ್ ನಲ್ಲಿರುವ ನಾನು ಇಂದು ಮನೆಯಿಂದಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದೆ. ಅನೇಕ ಮಹತ್ವಪೂರ್ಣ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು”.
“ಜೊತೆಗೆ ಹಿರಿಯ ಅಧಿಕಾರಿಗಳು ಮತ್ತು ವಿಕ್ಟೋರಿಯಾ, ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ, ಬೌರಿಂಗ್ ಮೊದಲಾದ ಕೋವಿಡ್ ಆಸ್ಪತ್ರೆಗಳ ನಿರ್ದೇಶಕರ ಜೊತೆಗೆ ಮಂಗಳವಾರ ನನ್ನ ಮನೆಯಿಂದಲೇ ವಿಡಿಯೋ ಸಂವಾದ ನಡೆಸಿದ್ದೇನೆ. ರೋಗಿಗಳ ದಾಖಲಾತಿ, ಆಹಾರ, ಸ್ವಚ್ಛತೆ, ಚಿಕಿತ್ಸೆಗಳಲ್ಲಿ ಲೋಪಗಳ ದೂರು ಬಂದಲ್ಲಿ ನಿರ್ದೇಶಕರುಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದೇನೆ” ಎಂದು ಸುಧಾಕರ್ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.